ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಬಸವ ನಗರದ ಜ್ಞಾನ ಭಾರತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರೇಮಾ ನಾಯಕ್ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.
ಕೋರವಾರ ಶಾಖೆಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಎ.೨೬ರಂದು ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿ ಆಯೋಜಿಸಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಜ್ಞಾನಭಾರತಿ ಶಾಲೆಯ ಆದರ್ಶ ಶಿಕ್ಷಕಿ ಪ್ರೇಮಾ ನಾಯ್ಕ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ.
ಕಳೆದ ಸುಮಾರು ಎರಡು ದಶಕಗಳಿಂದ ಜ್ಞಾನಭಾರತಿ ಶಾಲೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಅವರನ್ನು ಗುರುತಿಸಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಭಾಜನರಾಗಿದ್ದಾರೆ.
ಅವರಿಗೆ ಜ್ಞಾನ ಭಾರತಿ ಶಾಲೆಯ ಸಹದ್ಯೋಗಿಗಳು, ಆಡಳಿತ ಮಂಡಳಿ, ವಿದ್ಯಾರ್ಥಿಗಳು, ಪಾಲಕರು ಅಭಿಮಾನಿಗಳು ಶುಭ ಕೋರಿದ್ದಾರೆ.

