ವಿಜಯಪುರ: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 29 ರಂದು ಶುಕ್ರವಾರ ಹೃದಯ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ವೈದ್ಯರ ಸಮಾಲೋಚನೆ ಆಯೋಜಿಸಲಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಸ್ಪತ್ರೆಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಸೆಪ್ಟೆಂಬರ್ 29 ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯ ವರೆಗೆ ಈ ಶಿಬಿರ ನಡೆಯಲಿದೆ. ಈ ಸಂದರ್ಭದಲ್ಲಿ ವೈದ್ಯರ ಸಂದರ್ಶನ, ಬಿಪಿ, ಸಕ್ಕರೆ ಖಾಯಿಲೆ ಪರೀಕ್ಷೆ ಮತ್ತು ಇಸಿಜಿ ಯನ್ನು ಉಚಿತವಾಗಿ ಮಾಡಲಾಗುವುದು. ಅಲ್ಲದೇ, ರಿಯಾಯಿತಿ ದರದಲ್ಲಿ ಇನ್ನುಳಿದ ತಪಾಸಣೆಗಳನ್ನು ನಡೆಸಲಾಗುವುದು. ವಿಜಯಪುರ ಮತ್ತು ಸುತ್ತ ಮುತ್ತಲಿನ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೋ: 8951178777 ಮತ್ತು 9481087009 ಸಂಪರ್ಕಿಸಬಹುದಾಗಿದೆ.
Related Posts
Add A Comment