Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡ ಕ್ರೀಡಾಪಟುವಿನ ತರಬೇತಿಗೆ ಬಿಎಲ್ಡಿಇ ಸಂಸ್ಥೆ ಆರ್ಥಿಕ ನೆರವು
(ರಾಜ್ಯ ) ಜಿಲ್ಲೆ

ಬಡ ಕ್ರೀಡಾಪಟುವಿನ ತರಬೇತಿಗೆ ಬಿಎಲ್ಡಿಇ ಸಂಸ್ಥೆ ಆರ್ಥಿಕ ನೆರವು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ರೀಡಾಪಟು ಎಂ.ಡಿ.ಪೈಗಂಬರ್ ಗೌಂಡಿ ಗೆ ಎಂಎಲ್ಸಿ ಸುನೀಲಗೌಡ ಪಾಟೀಲ ಚೆಕ್ ವಿತರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಏಷಿಯನ್ ಗೇಮ್ಸ್- 2026ಕ್ಕೆ ತಯಾರಿ ನಡೆಸುತ್ತಿರುವ ಬಡ ಪ್ರತಿಭಾವಂತ ಕ್ರೀಡಾಪಟುವಿಗೆ ಹೆಚ್ಚಿನ ತರಬೇತಿಗಾಗಿ ಬಿ.ಎಲ್.ಡಿ.ಇ ಸಂಸ್ಥೆಯಿಂದ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ ಅವರು ಆರ್ಥಿಕ ನೆರವು ನೀಡುವ ಮೂಲಕ ಓಟಗಾರರ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ಧಾರೆ.
ಸಂಸ್ಥೆಯ ಅಧ್ಯಕ್ಷರ ಆಶಯದಂತೆ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಗುರುವಾರ ನಗರದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ತಿಕೋಟಾ ತಾಲೂಕಿನ ಬಾಬಾನಗರದ ಯುವ ಕ್ರೀಡಾಪಟು ಎಂ. ಡಿ. ಪೈಗಂಬರ್ ಗೌಂಡಿ ಅವರಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿದರು.
ಈ ಕ್ರೀಡಾಪಟು ಏಷಿಯನ್ ಗೇಮ್ಸ್ಗೆ ತಯಾರಿ ನಡೆಸುತ್ತಿದ್ದು, ಹೆಚ್ಚಿನ ತರಬೇತಿಗಾಗಿ ಕೇರಳದಲ್ಲಿರುವ ಅಂತಾರಾಷ್ಟ್ರೀಯ ಸಲೀಂ ಶೇಕ ಅಕಾಡೆಮಿ ತರಬೇತಿಗೆ ಸೇರಿದ್ದಾರೆ. ಇವರಿಗೆ ಅಥ್ಲೇಟಿಕ್ ತರಬೇತಿಗೆ ಅಗತ್ಯವಾಗಿರುವ ಕ್ರೀಡಾ ಸಲಕರಣೆ, ವಸತಿ ಮತ್ತೀತರ ಶುಲ್ಕಕ್ಕೆ ಒಟ್ಟು ರೂ. 4.60 ಅಗತ್ಯವಿದ್ದು, ಇದರ ಮೊದಲ ಕಂತಾದ ರೂ. 2.30 ಲಕ್ಷ ಚೆಕ್‌ನ್ನು ಶಾಸಕರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ನಿಮ್ಮ ಕನಸು ನನಸಾಗಲಿ. ಏಷಿಯನ್ ಗೇಮ್ಸ್- 2026ನಲ್ಲಿ ಉತ್ತಮ ಸಾಧನೆ ಮಾಡಿ ಬಸವ ನಾಡು ವಿಜಯಪುರ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರುವಂತೆ ಶುಭ ಹಾರೈಸಿದರು.
ಈ ವೇಳೆ ಮಾತನಾಡಿದ ಯುವ ಕ್ರೀಡಾಪಟು ಎಂ. ಡಿ. ಪೈಗಂಬರ್ ಗೌಂಡಿ ಮಾತನಾಡಿ ನಮ್ಮಂಥ ಬಡ ಕ್ರೀಡಾಪಟುಗಳ ಕನಸು ನನಸಾಗಲು ಸಚಿವ ಎಂ. ಬಿ. ಪಾಟೀಲ ಮತ್ತು ಶಾಸಕ ಸುನೀಲಗೌಡ ಪಾಟೀಲ ಅವರು ನೆರವಾಗಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ನಮ್ಮ ತಾಯಿ ಸಾಹೇಬಿ ಗೌಂಡಿ ಬಾಬಾನಗರದಲ್ಲಿ ಕೂಲಿ ಕೆಲಸ ಮಾಡುತ್ತಾರೆ. ತಂದೆ ಅಲ್ಲಾಭಕ್ಷಿ ಗೌಂಡಿ ನಿಧನರಾಗಿದ್ದು, ಸಹೋದರಿಯರಾದ ಬಿಬಿಜಾನ ಬಾರಿಕಟ್ಟಿ ಮತ್ತು ಜರೀನಾ ಮುಲ್ಲಾ ಅವರು ಮದುವೆಯಾಗಿದ್ದಾರೆ. ನಾನು ಒಂದರಿಂದ ನಾಲ್ಕನೇ ತರಗತಿ ವರೆಗೆ ತೆಲಸಂಗದಲ್ಲಿ, ಐದರಿಂದ ಹತ್ತನೇ ತರಗತಿವರೆಗೆ ಮತ್ತು ತಿಕೋಟಾದ ಎ. ಬಿ. ಜತ್ತಿ ಪಿಯು ಕಾಲೇಜಿನಲ್ಲಿ ವಿದ್ಯಾಭಾಷ ಈಗ ಮುಡಬಿದರೆ ಆಳ್ವಾಸ್ ಕಾಲೇಜಿನಲ್ಲಿ ಬಿ.ಎ ಮೂರನೇ ಸಮಿಸ್ಟರ್‌ನಲ್ಲಿ ಓದುತ್ತಿದ್ದೇನೆ. ರಾಜ್ಯ ಮಟ್ಟದ 100 ಮತ್ತು 200 ಮಿಟರ್ ಓಟದಲ್ಲಿ ಮೂರನೇ ಸ್ಥಾನ ಪಡೆದಿದ್ದೇನೆ. ಮೈಸೂರು ದಸರಾ ಕ್ರೀಡಾಕೂಟದಲ್ಲಿ 2017 ರಿಂದ 2025ರ ವರೆಗೆ ಸತತವಾಗಿ ಪಾಲ್ಗೊಂಡು ಜಯಗಳಿಸಿದ್ದೇನೆ. ಅಷ್ಟೇ ಅಲ್ಲ, ರಾಷ್ಟ್ರೀಯ ಮಟ್ಟದಲ್ಲಿ ಏಳು ಸಲ ನಾನಾ ಅತ್ಲೆಟಿಕ್ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿದ್ದೇನೆ ಎಂದು ತಿಳಿಸಿದರು. ಅಲ್ಲದೇ, ಇನ್ನು ಮುಂದೆ ಮತ್ತಷ್ಟು ಕಷ್ಟಪಟ್ಟು ತಯಾರಿ ನಡೆಸಿ ಮುಂಬರುವ ಏಷಿಯನ್ಸ್ ಗೇಮ್‌ನಲ್ಲಿ 100 ಮತ್ತು 200 ಮೀಟರ್ ಓಟದಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿ ಪದಕ ಗೆಲ್ಲಲು ಶ್ರಮಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿವಿ ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಕ್ರೀಡಾಪಟುವಿನ ತಾಯಿ ಸಾಹೇಬಿ,
ಬಿ.ಎಲ್.ಡಿ.ಇ ಸಂಸ್ಥೆಯ ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ಬಾಬಾನಗರದ ಮುಖಂಡರಾದ ಸಂಜುಕುಮಾರ ಆಯತವಾಡ, ಹರೀಶ ಬಿರಾದಾರ, ವಿದ್ಯಾನಂದ ನಂದಗಾಂವ, ಶಂಕರ ಹೊನವಾಡ, ಮುತ್ತಪ್ಪ ನಾವಿ, ಗುರುಗೌಡ ಬಿರಾದಾರ, ಚಂದ್ರಶೇಕರ ರುದ್ರಗೌಡರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.