ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ ಕರ್ನಾಟಕ ರಾಜ್ಯ ದಲಿತ ಸಮಿತಿ ಕೋರವಾರ ತಾ.ದೇವರ ಹಿಪ್ಪರಗಿ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿರುವ ಸಾಧಕರ ಸನ್ಮಾನ ಸಮಾರಂಭದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಪ್ರಧಾನ ಸಮಿತಿಯ ಅಧ್ಯಕ್ಷರು ಅರುಣ ಕೋರವಾರ ತಿಳಿಸಿರುತ್ತಾರೆ.
ಪ್ರಶಸ್ತಿ ಪ್ರಧಾನ ಸಮಾರಂಭವು ಇದೇ 26 ಎಪ್ರಿಲ್ 2025 ರಂದು ಕೋರವಾರ ದಲ್ಲಿ ಜರುಗಲಿದೆ.ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಸಂಸ್ಥೆಯ ಅಧ್ಯಕ್ಷರು ಎಸ್.ಆಯ್.ಜೋಗೂರ, ಕಾರ್ಯದರ್ಶಿ ಪ್ರಶಾಂತ ಬಡದಾಳ, ಸದಸ್ಯರಾದ ಅರವಿಂದ ಕುಲಕರ್ಣಿ, ಅಲೋಕ ಬಡದಾಳ, ಅಶೋಕ ವಾರದ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಗಡದೆ, ಸುನಿತಾ ಗುಂಡದ, ವೀಣಾ ಗುಡಿಮಠ ಮುಂತಾದವರು ಹರ್ಷ ವ್ಯಕ್ತ ಪಡಿಸಿದ್ದಾರೆ

