Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಬಲೇಶ್ವರ ಕೆರೆಗೆ ನೀರು ತುಂಬಿಸಲು ಯೋಜನೆ ಸಿದ್ಧ :ಮನಗೂಳಿ
(ರಾಜ್ಯ ) ಜಿಲ್ಲೆ

ಬಬಲೇಶ್ವರ ಕೆರೆಗೆ ನೀರು ತುಂಬಿಸಲು ಯೋಜನೆ ಸಿದ್ಧ :ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಳೆದ ಬೆಸಿಗೆಯಲ್ಲಿ ಬಬಲೇಶ್ವರ, ಬೆನಕೊಟಗಿ, ಕಲಹಳ್ಳಿ, ರಾಂಪೂರ, ಮಂಗಳೂರ, ಆಹೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬಬಲೇಶ್ವರ ಕೆರೆಗೆ ನೀರು ತುಂಬಿಸುವಂತೆ ಸಾಕಷ್ಟು ಬಾರಿ ಒತ್ತಾಯ ಮಾಡಿದಾಗ ಕಾಲುವೆಯನ್ನು ಅಗೆದು ನೀರು ತುಂಬಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಏನೇ ಮಾಡಿದರೂ ನೀರು ತುಂಬಿಸುವಲ್ಲಿ ಸಫಲತೆ ಸಿಗಲಿಲ್ಲ. ಆಗ ಸ್ಥಳ ಪರಿಶೀಲನೆ ಮಾಡಲಾಗಿ ಬೆನಕೊಟಗಿ ಹಳ್ಳದಿಂದ ಬಬಲೇಶ್ವರ ಕೆರೆಗೆ ನೀರು ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಯೋಜನೆಯನ್ನು ರೂಪಿಸಲಾಯಿತು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ರಾಂಪುರ ರಸ್ತೆಯ ಕಾಲುವೆ ಬಳಿ ನೀರಾವರಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರು, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯ್.ಬಿ.ಎಸ್ ವಿಭಾಗ ೦೨ ಇಂಡಿ ಏತ ನೀರಾವರಿ ಕಾಲುವೆಯ ವಿತರಣಾ ಕಾಲುವೆ ಸಂಖ್ಯೆ ೩೧ಎ ಮೂಲಕ ಬಬಲೇಶ್ವರ ಕೆರೆಗೆ ೧ಕೋಟಿ ೩೦ಲಕ್ಷ ರೂ. ಮೊತ್ತದ ನೀರು ತುಂಬುವ ಕಾಮಗಾರಿ ಪ್ರಾರಂಭದ ಪೂಜೆಯನ್ನು ನೇರವೇರಿಸ ಮಾತನಾಡಿದ ಅವರು, ಈ ಕಾರ್ಯಕ್ಕೆ ಸಿಎಂ, ಡಿಸಿಎಂ ಅವರ ಸಹಕಾರವು ಇದೆ. ಮೋರಟಗಿ, ಹಂದಿಗನೂರ, ಪುರದಾಳ, ಆಲಮೇಲ, ಬಬಲೇಶ್ವರ ಹಾಗೂ ಯಂಕAಚಿ ಗ್ರಾಮಗಳ ಕೆರೆಗಳ ಪುನರುತ್ಥಾನ ಹಾಗೂ ನೀರು ತುಂಬಿಸುವ ಕಾರ್ಯಕ್ಕೆ ಶೀಘ್ರ ಚಾಲನೆ ನೀಡಲಾಗುವುದು. ಗುತ್ತಿಗೆದಾರರು ಹಾಗೂ ಸಂಬAಧಿಸಿದ ಅಧಿಕಾರಿಗಳು ಪ್ರಾಮಾಣಿಕವಾಗಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದರು.
ಮಾಜಿ ಶಾಸಕ ರಮೇಶ ಭೂಸನೂರ ಅವರು ಕೇಂದ್ರ ಸಚಿವ ನೀತಿನ ಗಡ್ಕರಿ ಅವರಿಂದ ಅನುದಾನ ತಂದಿದ್ದೇವೆ ಎಂದು ಸಾಕಷ್ಟು ಬಾರಿ ಹೇಳಿದ್ದಾರೆ. ಮಾಜಿ ಶಾಸಕರೇ ನಿಮ್ಮ ಅವಧಿಯಲ್ಲಿ ಆಲಮೇಲದಿಂದ ನಿಮ್ಮ ಸ್ವಗ್ರಾಮಕ್ಕೆ ಹೋಗುವ ಸುಸಜ್ಜಿತ ರಸ್ತೆ ನಿರ್ಮಿಸಲು ಸಾಧ್ಯವಾಗಿಲ್ಲ. ಮೇಲಿಂದ ಮೇಲೆ ದೆಹಲಿಗೆ ಹೋಗಿ ದುಡ್ಡು ವ್ಯರ್ಥವೇಕೆ ಮಾಡುತ್ತೀರಿ. ಆ ಕೆಲಸವನ್ನು ಕರ್ನಾಟಕ ಸರಕಾರದಲ್ಲಿಯೇ ಮಾಡಿಸಬಹುದು. ಈಗಾಗಲೇ ೪ಕಿಮಿ ರಸ್ತೆ ನಿರ್ಮಾಣ ಮಾಡಲಾಗಿದೆ. ಇನ್ನುಳಿದ ರಸ್ತೆಗೆ ಶೀಘ್ರ ಮಂಜೂರಾತಿ ತರಲಾಗುವುದು ಎಂದರು.
ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ವಾಯ್.ಸಿ.ಮಯೂರ ಹಾಗೂ ಬುದ್ದು ನಾಯಕ್ ಮಾತನಾಡಿದ ಅವರು, ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸುವ ಕಾರ್ಯದಲ್ಲಿ ಅವರು ತೊಡಗಿದ್ದು ಸಂತಸ ತಂದಿದೆ. ೨೮೦ಎಕರೆ ವಿಸ್ತೀರ್ಣ ಹೊಂದಿದ ಬಬಲೇಶ್ವರ ಕೆರೆಗೆ ನೀರು ತುಂಬಿಸುವ ಬಹುದಿನಗಳ ಬೇಡಿಕೆ ಇಂದಿನ ಶಾಸಕ ಅಶೋಕ ಮನಗೂಳಿ ಅವರು ಮಾಡಿದಕ್ಕೆ ಬಬಲೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಭಾರಿಯಾಗಿದ್ದೇವೆ. ಈ ಭಾಗದ ಜನ ಜಾನುವಾರುಗಳಿಗೆ ನೀರು ಒದಗಿಸುವ ಅವರ ಕಾರ್ಯ ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ಭಾಗಪ್ಪಗೌಡ ಬಿರಾದಾರ, ರಾಚಯ್ಯ, ನಬಿಸಾಬ್, ದವಲತ ದೊಡಮನಿ, ಈರಣ್ಣ ನಾಯ್ಕೋಡಿ, ಶ್ರೀಶೈಲ ದೇಸಾಯಿ, ಗಂಗಾಧರ ಚಿಂಚೋಳ್ಳಿ, ಎಇಇ ಭಾಸ್ಕರ್, ಫಾರೂಕ್, ಜೈಭೀಮ ತಳಕೇರಿ, ಕುಮಾರ ವರ್ಕಾನಳ್ಳಿ, ಅನಿಲ ಪಾಟೀಲ, ಅನೀಲಗೌಡ ಪಾಟೀಲ, ಸಂತೋಷ ಪಾಟೀಲ, ಶರಣಗೌಡ ಪಾಟೀಲ, ಶರಣು ನಾಯ್ಕೋಡಿ, ಬಸವರಾಜ ಪಾಟೀಲ ಸೇರಿದಂತೆ ಹಲವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.