ಉದಯರಶ್ಮಿ ದಿನಪತ್ರಿಕೆ
ವಿಜಯಪುರ:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಇಂಡಿ, ಸಿಂದಗಿ, ಬಸವನ ಬಾಗೇವಾಡಿ ಮತ್ತು ಮುದ್ದೇಬಿಹಾಳದ ತಾಲೂಕು ಕಾನೂನು ಸೇವಾ ಸಮಿತಿಗೆ ಹೊಸದಾಗಿ ಪ್ಯಾನಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ಯಾನಲ್ ವಕೀಲರಾಗಿ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳವರು hಣಣಠಿs://viರಿಚಿಥಿಚಿಠಿuಡಿಚಿ.ಜಛಿouಡಿಣs.gov.iಟಿ/ಜಟsಚಿ/ ವೆಬ್ಸೈಟ್ ಮೂಲಕ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಮೇ೦೨ ರೊಳಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್.ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
