Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಗೌರವದೊಂದಿಗೆ ಯೋಧ ಶ್ರೀಶೈಲ ಹಿರೋಡಗಿ ಅಂತ್ಯಕ್ರಿಯೆ
(ರಾಜ್ಯ ) ಜಿಲ್ಲೆ

ಸರ್ಕಾರಿ ಗೌರವದೊಂದಿಗೆ ಯೋಧ ಶ್ರೀಶೈಲ ಹಿರೋಡಗಿ ಅಂತ್ಯಕ್ರಿಯೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದ ಬಸ್ ನಿಲ್ದಾಣ ಮುಂಭಾಗ ದೆಹಲಿಯಲ್ಲಿ ಗುರುವಾರ ಹೃದಯಾಘಾತದಿಂದ ವೀರಮರಣ ಹೊಂದಿದ್ದ ಯೋಧ ಶ್ರೀಶೈಲ ಯಮನಪ್ಪ ಹಿರೋಡಗಿ (೫೪) ಅವರ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ, ಆಪ್ತರ, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಯೋಧನ ಪಾರ್ಥಿವ ಶರೀರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನೆರವೇರಿತು. ಮೆರವಣಿಗೆಯುದ್ದಕ್ಕೂ ದೇಶದ ಭಾವುಟ ರಾರಾಜಿಸಿದವು. ದೇಶಭಕ್ತಿಗೀತೆಗಳು ಮೊಳಗಿದವು. ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
೧೯೯೦ರ ಡಿಸೆಂಬರ ೧೨ ರಂದು ತಮ್ಮ ೧೯ ನೇ ವಯಸ್ಸಿನಲ್ಲಿ ಸಿಆರ್ಪಿಎಫ್ ಸೇನೆಗೆ ಸೇರ್ಪಡೆಗೊಂಡಿದ್ದ ಯೋಧ ಶ್ರೀಶೈಲ ಹಿರೋಡಗಿ ಅವರು ಹೈದರಾಬಾದ, ಜಮ್ಮು ಮತ್ತು ಕಾಶ್ಮೀರ, ಪಂಜಾಬ, ಆಸ್ಸಾಂ, ತ್ರಿಪುರ, ಮಣಿಪುರದಲ್ಲಿ ಕಳೆದ ೩೪ ವರ್ಷದಿಂದ ಸಿಆರ್ಪಿಎಫ್ನ ಎಸ್ಐ ,ಕ್ವಾಟರ್ ಮಾಸ್ಟರ್ಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಧ್ಯ ದೆಹಲಿಯಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ ಶ್ರೀಶೈಲ ಹಿರೋಡಗಿ ಅವರು ಗುರುವಾರ ವೀರಮರಣ ಹೊಂದಿದ್ದಾರೆ. ಮೃತ ಯೋಧನಿಗೆ ಪತ್ನಿ, ಇಬ್ಬರು ಪುತ್ರರು, ಒರ್ವ ಪುತ್ರಿ, ಮೂವರು ಸಹೋದರರು, ಒರ್ವ ಸಹೋದರಿ ಇದ್ದಾರೆ.
ಸಚಿವ ಶಿವಾನಂದ ಪಾಟೀಲ ಮೃತ ಯೋಧನ ಪಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅಂತಿಮ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ನಂತರ ಜರುಗಿದ ಸರ್ಕಾರಿ ಗೌರವ ಕಾರ್ಯಕ್ರಮ, ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ಅನೇಕ ಅಧಿಕಾರಿಗಳು, ಮುಖಂಡರು, ಜನರು ಮೃತ ಯೋಧನ ಅಂತಿಮ ದರ್ಶನ ಪಡೆದುಕೊಂಡರು. ಯೋಧನ ಅಂತಿಮ ಸಂಸ್ಕಾರದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ತಾಪಂ ಇಓ ಪ್ರಕಾಶ ದೇಸಾಯಿ, ಮನಗೂಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಐ.ರೇವೂರಕರ,ಮನಗೂಳಿ ಪಿಎಸ್ಐ ಶ್ರೀಕಾಂತ ಕಾಂಬಳೆ, ಉಕ್ಕಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗೊಂಡ ಸಿಂದಗಿ, ಮನಗೂಳಿ ಪಪಂ ಅಧ್ಯಕ್ಷ ಡಾ.ಎಂ.ಡಿ.ಮೇತ್ರಿ, ಸಚಿವರ ಸಹೋದರ ಶಿವಶರಣಗೌಡ ಪಾಟೀಲ, ಸಚಿವರ ಪತ್ನಿ ಭಾಗ್ಯಶ್ರೀ ಪಾಟೀಲ, ಮುಖಂಡರಾದ ಎ.ಎಂ.ಪಾಟೀಲ, ಚಂದ್ರಶೇಖರಗೌಡ ಪಾಟೀಲ, ವಿಶ್ವನಾಥಗೌಡ ಪಾಟೀಲ, ಉಮೇಶ ಕಾರಜೋಳ, ರಾಹುಲ ಕಲಗೊಂಡ, ಸಿದ್ರಾಮ ಕಾಖಂಡಕಿ, ಬಸವನಬಾಗೇವಾಡಿ ತಾಲೂಕಿನ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಸಚಿವ ಶಿವಾನಂದ ಪಾಟೀಲ ಸಂತಾಪಃ ಗಡಿಭದ್ರತಾ ಪಡೆಯ ಯೋಧ ತಾಲೂಕಿನ ಉಕ್ಕಲಿ ಗ್ರಾಮದ ಶ್ರೀಶೈಲ ಯಮನಪ್ಪ ಹಿರೋಡಗಿ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಕರ್ತವ್ಯನಿರತರಾದ ವೇಳೆಯಲ್ಲಿ ಯೋಧ ಹೃದಯಾಘಾತದಿಂದ ನಿಧನರಾಗಿದ್ದು ನೋವಿನ ಸಂಗತಿ. ಅವರ ಸಾವು ತೀವ್ರ ನೋವನ್ನುಂಟು ಮಾಡಿದೆ. ಮೃತ ಯೋಧನ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ. ಮೃತ ಯೋಧನ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲೆಂದು ಸಚಿವ ಶಿವಾನಂದ ಪಾಟೀಲ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.