ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಎಚ್‌ಜಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಶಾಂತಿಲಾಲ್ ಚವ್ಹಾಣ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೋರವಾರ ಶಾಖೆವತಿಯಿಂದ ಏಪ್ರಿಲ್ ೨೬ರಂದು ಆಯೋಜಿಸಲಾಗಿದೆ. ಅಂದು ಉಪನ್ಯಾಸಕ ಡಾ.ಶಾಂತಿಲಾಲ ಚವ್ಹಾಣ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಇದನ್ನು ಗುರುತಿಸಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ. ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಅಶೋಕ ಮನಗೂಳಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು, ಹಿತೈಷಿಗಳು ಶುಭ ಕೋರಿದ್ದಾರೆ. ಇನ್ನಷ್ಟು ಪ್ರಶಸ್ತಿಗಳು ಇವರ ಮುಡಿಗೇರಲಿ ಎಂದು ಹಾರೈಸಿದ್ದಾರೆ.

