ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ವಿಶ್ವಗುರು, ಸಾಂಸ್ಕ್ರತಿಕ ನಾಯಕ ಬಸವೇಶ್ವರ ಜಯಂತಿಯಂಗವಾಗಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ವಚನ ಕಂಠಪಾಠ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಕೊಡಲಾಗುವುದು, ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಸವೇಶ್ವರ ದೇವಾಲಯದ ಆವರಣದಲ್ಲಿರುವ ಕಚೇರಿಯಲ್ಲಿ ಏ. 26 ನೇ ತಾರೀಖಿನ ಒಳಗಾಗಿ ತಮ್ಮ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬಸವರಾಜ ನಂದಿಹಾಳ ಮೊ- 9916402368 ಅಥವಾ ವೈ. ಎನ್. ಮಿಣಜಗಿ ಮೊ-9900762146 ಸಂಪರ್ಕಿಸಬೇಕೆಂದು ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
