Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಲಿತರಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ಸಿಎಂ ಗೆ ಇಲ್ಲ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ದಲಿತರಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ಸಿಎಂ ಗೆ ಇಲ್ಲ :ಜಿಗಜಿಣಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಲಿತರಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ಸಿಎಂ ಗೆ ಇಲ್ಲ :ಜಿಗಜಿಣಗಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನ್ಯಾ.ಸದಾಶಿವ ಆಯೋಗದ ವರದಿಯನ್ನು ಬದಿಗಿರಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಲಿತ ಬಾಂಧವರಿಗೆ ನ್ಯಾಯ ಕೊಡಿಸುವ ನೈಜ ಇಚ್ಛಾಶಕ್ತಿ ಇಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.
ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಹಿಂದ ನಾಯಕ ಎಂದು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಹಿಂದ ಪರವಾದ ಯಾವ ಕಾಳಜಿಯೂ ಇಲ್ಲ. ತಾನು ಮಾಡುತ್ತಿರುವ ತಪ್ಪುಗಳನ್ನು ಮುಚ್ಚಿಹಾಕಲು ಈಗ ಜಾತಿ ಜನಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಲಿತ ಬಾಂಧವರ ಮೇಲೆ ನೈಜವಾದ ಕಾಳಜಿ ಇದ್ದಿದ್ದರೆ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುತ್ತಿದ್ದರು, ೨೦೧೨-೧೩ ರಲ್ಲಿಯೇ ನ್ಯಾ.ಸದಾಶಿವ ಆಯೋಗ ವರದಿಯನ್ನು ಸರ್ಕಾರಕ್ಕೆ ನೀಡಿದೆ, ಇನ್ನು ಅನುಷ್ಠಾನಗೊಳಿಸಬೇಕಾದ ಸರ್ಕಾರ ನಂತರ ಅಂದರೆ ೨೦೧೫ ರಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸಲು ತರಾತುರಿ ಮಾಡುತ್ತಿದೆ, ಇದಕ್ಕಿಂತಲೂ ಎಷ್ಟೋ ವರ್ಷ ಪೂರ್ವ ಒಳಮೀಸಲಾತಿ ಶಿಫಾರಸ್ಸುಳ್ಳ ನ್ಯಾ.ಸದಾಶೀವ ಆಯೋಗದ ವರದಿಯನ್ನು ಏಕೆ ಜಾರಿಗೊಳಿಸಲಿಲ್ಲ ಎಂದು ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಲಿತರಿಗೆ ನ್ಯಾಯ ಕೊಡಿಸುವುದನ್ನು ಬಿಟ್ಟು ನ್ಯಾ.ಸದಾಶಿವ ಆಯೋಗದ ವರದಿಯನ್ನು ಬದಿಗಿರಿಸಿಕೊಂಡಿದ್ದಾರೆ, ನಂತರ ರಚನೆಯಾದ ಕಾಂತರಾಜ್ ಆಯೋಗದ ವರದಿ ಜಾರಿ ಮಾಡಲು ಮುಂದಾಗಿದ್ದಾರೆ. ೨೦೧೫ ರಿಂದಲೂ ಸಹ ನ್ಯಾ.ಸದಾಶೀವ ಆಯೋಗದ ವರದಿ ಜಾರಿಗೆ ಆಸಕ್ತಿ ವಹಿಸುತ್ತಿಲ್ಲ, ಈ ರೀತಿ ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಸಿದ್ಧರಾಮಯ್ಯ ಅವರಿಗೆ ಅಹಿಂದ ನಾಯಕ ಎಂಬ ಪಟ್ಟ ಕಟ್ಟುವ ಅಗತ್ಯವಿಲ್ಲ ಎಂದು ಜಿಗಜಿಣಗಿ ಹೇಳಿದ್ದಾರೆ. ಅಹಿಂದ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಅಹಿಂದ ವರ್ಗಕ್ಕೆ ಯಾವ ರೀತಿಯಿಂದಲೂ ನ್ಯಾಯ ದೊರಕಿಲ್ಲ ಹೀಗಾಗಿ ಅವರನ್ನು ಅಹಿಂದ ನಾಯಕ ಎಂದು ಬಿಂಬಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಈ ಜಾತಿ ಜನಗಣತಿಯನ್ನು ಸೃಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆಡಳಿತ ನಡೆಸಲು ವೈಫಲ್ಯವಾಗಿದ್ದಾರೆ, ಬೆಲೆ ಏರಿಕೆ ಮೊದಲಾದ ಜನವಿರೋಧಿ ಕ್ರಮ ಹಾಗೂ ಮುಡಾ ಹಗರಣ, ಗಣಿ ನವೀಕರಣ ಹಗರಣ ಹೀಗೆ ಸಾಲು ಸಾಲು ಹಗರಣಗಳಿಂದ ಜನರಿಗೆ ಸಿದ್ಧರಾಮಯ್ಯ ಅವರಿಗೆ ವಿಶ್ವಾಸ ಸಂಪೂರ್ಣ ಕಡಿಮೆಯಾಗಿದೆ, ಹೀಗಾಗಿ ಅವರೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.