ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಏ.೨೨ ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವ ಭೂಮಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಹಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಕಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ತಹಸೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಸಿಪಿಐ ಮಹಮ್ಮದ ಫಸಿಯುದ್ಧೀನ ಭಾಗಿಯಾಗಲಿದ್ದು, ವಿಶ್ವ ಭೂಮಿ ದಿನದ ಕುರಿತು ನ್ಯಾಯವಾದಿ ಎಸ್.ಎಸ್.ಬಿರಾದಾರ ವಿಶೇಷ ಉಪನ್ಯಾಸ ನೀಡಲಿದ್ದಾರೆ.
