ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಮನಗೂಳಿ ರಸ್ತೆಯಲ್ಲಿರುವ ಜಿಲ್ಲಾ ಬಾಲ ಭವನದಲ್ಲಿ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ೨೦೨೫-೨೬ನೇ ಸಾಲಿನ ಬೇಸಿಗೆ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ದಿನಾಂಕ: ೨೩-೦೪-೨೦೨೫ ರಿಂದ ೦೭-೦೫-೨೦೨೫ರವರಗೆ ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೧.೩೦ ರವರೆಗೆ ನಡೆಯುವ ಈ ಶಿಬಿರದಲ್ಲಿ ಮಕ್ಕಳಿಗೆ ಚಿತ್ರಕಲೆ, ನೃತ್ಯ, ಸಂಗೀತ, ಕರಾಟೆ ಹಾಗೂ ಕರಕುಶಲ ಕಲೆ ಕುರಿತಾಗಿ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೭೭೬೦೪೦೨೨೩೯ಗ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
