ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದರೆ ದಿನಾಂಕ:೨೧-೦೪-೨೦೨೫ ರಿಂದ ೦೨-೦೫-೨೦೨೫ ರೊಳಗಾಗಿ ಕಚೇರಿ ಸಮಯದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
