Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಎಲ್ಡಿಇ ಸಂಸ್ಥೆ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ
(ರಾಜ್ಯ ) ಜಿಲ್ಲೆ

ಬಿಎಲ್ಡಿಇ ಸಂಸ್ಥೆ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಎಲ್ಡಿಇ ಸಂಸ್ಥೆ ಪ್ರ.ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯ ಸರ್ಕಾರ ಆಯುರ್ವೇದ ಮಹಾವಿದ್ಯಾಲಯಕ್ಕೆ ಕೋಟೆಗೋಡೆ ಪಕ್ಕದಲ್ಲಿ ಲೀಸ್ ಆಧಾರದ ಮೇಲೆ 17ಎಕರೆ 20ಗುಂಟೆ ಜಮೀನನ್ನು ಮಂಜೂರು ಮಾಡಿದ್ದು, ಈ ಜಮೀನಿನಲ್ಲಿ ಅಂದಾಜು 1ಎಕರೆ 10ಗುಂಟೆ ಜಾಗೆಯಲ್ಲಿ ಈಗಾಗಲೇ ಕೆಲವರು ಕಾನೂನು ಬಾಹಿರವಾಗಿ ಅತೀಕ್ರಮಣ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಬಾಕಿ ಉಳಿದಿರುವ 16ಎಕರೆ 10ಗುಂಟೆ ಸರ್ಕಾರಿ ಆಸ್ತಿಯನ್ನು ಕಾಪಾಡಿಕೊಳ್ಳುವುದು ಲೀಸ್ ಪಡೆದ ಬಿ.ಎಲ್.ಡಿ.ಇ ಸಂಸ್ಥೆಯ ಜವಾಬ್ದಾರಿಯಾಗಿದೆ ಎಂದು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಬುಧವಾರ ಪ್ರಕಟಣೆ ನೀಡಿರುವ ಅವರು, ಇತ್ತೀಚೆಗೆ ಕೆಲವು ವ್ಯಕ್ತಿಗಳು “ಈ ಕೋಟೆಗೋಡೆಯಲ್ಲಿ ಚಾಲುಕ್ಯರ ಕಾಲದ ಸ್ವಯಂಭು ದೇವಸ್ಥಾನ ಇದೆ. ಬಿ.ಎಲ್.ಡಿ.ಇ ಸಂಸ್ಥೆಯವರು ಹಿಂದು ದೇವಸ್ಥಾನದ ಮೇಲೆ ದಾಳಿ ಮಾಡಿ, ದೇವಸ್ಥಾನದ ಜಾಗವನ್ನು ಅತೀಕ್ರಮಿಸಿ, ಅಕ್ರಮ ಕಟ್ಟಡ ಕಟ್ಟಿ, ಷಡ್ಯಂತ್ರ ಮಾಡಿದ್ದಾರೆ” ಎಂದು ಅಪಪ್ರಚಾರ ಮಾಡುತ್ತಿದ್ದು, ಇದು ವಾಸ್ತವಕ್ಕೆ ದೂರ ಎಂದು ತಿಳಿಸಿದ್ದಾರೆ.
ವಾಸ್ತವವಾಗಿ ವಿಜಯಪುರದ ಆದಿಲ್ ಶಾಹಿ ಅರಸರ ಕೋಟೆಗೋಡೆಗೆ ಹೊಂದಿಕೊಂಡು ಸಿ.ಟಿ.ಎಸ್ ನಂ:605ಎ/1ಎ ಕ್ಷೇತ್ರ 2ಎಕರೆ, 20ಗುಂಟೆ ಮತ್ತು ಸಿ.ಟಿ.ಎಸ್ ನಂ:605ಎ/1ಎ/1ಎ/2 ಕ್ಷೇತ್ರ 15ಎಕರೆ ಹೀಗೆ ಒಟ್ಟು ಆಸ್ತಿ 17ಎಕರೆ, 20 ಗುಂಟೆ ಪ್ರದೇಶ ಸರ್ಕಾರಿ ಜಾಗವನ್ನು 30 ವರ್ಷಗಳ ಅವಧಿಗೆ ಆಯುರ್ವೇದ ಮಹಾವಿದ್ಯಾಲಯ ಸಮಿತಿಗೆ ಸರ್ಕಾರದಿಂದ ಲೀಸ್ ನೀಡಲಾಗಿದೆ. 2011 ನೇ ವರ್ಷದಲ್ಲಿ ಆಯುರ್ವೇದ ಮಹಾವಿದ್ಯಾಲಯ ಸಮಿತಿ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ವಿಲೀನಗೊಂಡಿದೆ. ಸಂಸ್ಥೆ ವಿಲೀನದ ನಂತರ ಸರ್ಕಾರದಿಂದ ಮತ್ತೆ ಬಿ.ಎಲ್.ಡಿ.ಇ ಸಂಸ್ಥೆಗೆ 30 ವರ್ಷಗಳ ಕಾಲ ಲೀಸ್ ಮುಂದುವರೆಸಲಾಗಿದೆ. ಸರ್ಕಾರ ಸಂಸ್ಥೆಗೆ ನೀಡಿದ ಆಸ್ತಿಯನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿ ಆಗಿದೆ. ಸರ್ಕಾರ ಆಯುರ್ವೇದ ಮಹಾವಿದ್ಯಾಲಯಕ್ಕೆ ಲೀಸ್ ನೀಡಿದ ಆಸ್ತಿಯಲ್ಲಿ ಮುರಾಣಕೇರಿಯ ನಿವಾಸಿಗಳಿಂದ ಹಾಗೂ ಇತರೆ ಎರಡು ಕಡೆ 1ಎಕರೆ 10ಗುಂಟೆ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಿಕೊಂಡಿರುತ್ತಾರೆ. ಸಂಸ್ಥೆಗೆ ಸೇರಿದ ಸರ್ಕಾರಿ ಜಾಗೆಯನ್ನು ಅತೀಕ್ರಮಣ ಮಾಡಿಕೊಂಡಿರುವವರನ್ನು ಅಲ್ಲಿಂದ ತೆರವುಗೊಳಿಸುವಂತೆ ಸಂಬಂಧಿಸಿದವರಿಗೆ ನಾನು ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.
ಐತಿಹಾಸಿಕ ಕೋಟೆಗೋಡೆ ಭಾರತ ಸರ್ಕಾರದ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎ.ಎಸ್.ಐ) ವ್ಯಾಪ್ತಿಗೆ ಬರುತ್ತದೆ. ಅವರ ನಿಯಮಗಳು ಕಠಿಣವಾಗಿವೆ. ಐತಿಹಾಸಿಕ ದಾಖಲೆಗಳು, ಶಾಸನಗಳು ಆಧರಿಸಿ ಈ ದೇವಸ್ಥಾನದ ಖಚಿತತೆ ಕುರಿತು ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಕ್ರಮ ಜರುಗಿಸುವಂತೆ ಸಂಸ್ಥೆ ವತಿಯಿಂದಲೇ ಕೋರಿದ್ದೇವೆ. ಅದು ಸತ್ಯಾಂಶಗಳಿಂದ ಕೂಡಿದ್ದರೆ ಪ್ರಾಚ್ಯವಸ್ತು ಇಲಾಖೆ ಅದನ್ನು ಸಂರಕ್ಷಿಸಲಿದೆ. ಸಂಸ್ಥೆ ವತಿಯಿಂದ ಅದಕ್ಕೆ ಎಲ್ಲ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಬಿ.ಎಲ್.ಡಿ.ಇ ಸಂಸ್ಥೆ ಎಲ್ಲ ಜಾತಿ-ಜನಾಂಗದ ಸದಸ್ಯರಿರುವ ಈ ಭಾಗದ ಅತೀ ದೊಡ್ಡ ಲಿಂಗಾಯತ ಶಿಕ್ಷಣ ಸಂಸ್ಥೆಯಾಗಿದ್ದು, ಕಾಲ-ಕಾಲಕ್ಕೆ ನಮ್ಮ ಸಂಸ್ಥೆ ಆಸ್ತಿಗಳನ್ನು ಹಲವಾರು ದೇವಾಲಯಗಳಿಗೆ ಈ ಹಿಂದೆ ನಾವಾಗಿಯೇ ಬಿಟ್ಟುಕೊಟ್ಟಿರುವ ಉದಾಹರಣೆಗಳು ಇವೆ. ಹೀಗಾಗಿ, ಬೇರೆಯವರ ಆಸ್ತಿಯನ್ನು ಪಡೆದುಕೊಳ್ಳುವುದು, ಅದರ ಮೇಲೆ ಹಕ್ಕು ಚಲಾಯಿಸುವುದು ನಮ್ಮ ಸಂಸ್ಥೆಯ ಇತಿಹಾಸದಲ್ಲಿಯೇ ಇಲ್ಲ ಎಂದು ಸುನೀಲಗೌಡ ಪಾಟೀಲ ಸ್ಪಷ್ಟೀಕರಣ ನೀಡಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಪದೇ-ಪದೇ ಸಾಮಾಜಿಕ ಜಾಲತಾಣಗಳಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಆಡಳಿತ ಮಂಡಳಿಯ ಕುರಿತು ಹಗುರವಾಗಿ ಸುಳ್ಳು ಸುದ್ದಿಗಳನ್ನು ತೇಲಿ ಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದೇವೆ ಎಂದು ಸುನೀಲಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.