Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ

ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ

ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಳೆ ವರನಟ ಡಾ.ರಾಜ್‌ಕುಮಾರ್ ಜನ್ಮದಿನ ಆಚರಣೆ
(ರಾಜ್ಯ ) ಜಿಲ್ಲೆ

ನಾಳೆ ವರನಟ ಡಾ.ರಾಜ್‌ಕುಮಾರ್ ಜನ್ಮದಿನ ಆಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ ೨೪ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವರನಟ ಡಾ.ರಾಜ್‌ಕುಮಾರ್ ಅವರ ೯೭ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೧೦;೩೦ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಪರಿಷತ್ತಿನ ಶಾಸಕರಾದ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವಿ.ಪಾಟೀಲ, ಹಣಮಂತ ಆರ್ ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ ಹಾಗೂ ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಪ್ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ ಅವರು ಉಪನ್ಯಾಸ ನೀಡಲಿದ್ದಾರೆ. ವರನಟ ಡಾ.ರಾಜ್‌ಕುಮಾರ್ ಅವರ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವನ್ನು ಗಾಯಕರಾದ ವೀರೇಶ ವಾಲಿ ತಂಡ ನಡೆಸಿಕೊಡಲಿದ್ದಾರೆ.

ಪಾಲ್ಗೊಳ್ಳಲು ವಾರ್ತಾಧಿಕಾರಿ ದೊಡಮನಿ ಮನವಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ ೨೪ರಂದು ಬೆ.೧೦:೩೦ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ವರನಟ ಡಾ.ರಾಜ್‌ಕುಮಾರ್ ಅವರ ೯೭ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲು ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಎಲ್ಲ ಸಮಾಜದ ಗಣ್ಯರು ಭಾಗವಹಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ

ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ

ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ

ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.