ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಸಿಂದಗಿ ಶಿಸು ಅಭಿವೃದ್ದಿ ಯೋಜನೆ ವ್ಯಾಪ್ತಿಯ ಸಿಂದಗಿ, ಆಲಮೇಲ, ದೇವರಹಿಪ್ಪರಗಿ ಮತ್ತು ತಾಳಿಕೋಟೆ ತಾಲೂಕಿನಲ್ಲಿರುವ ೪ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆಯ್ಕೆಯಾದ ತಾತ್ಕಾಲಿಕವಾಗಿ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ : ೦೨-೦೫-೨೦೨೫ರೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸಿಂದಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
