Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ

ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ

ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಳಾದ ರಸ್ತೆ ದುರಸ್ಥಿಗೆ ಹುಣಶ್ಯಾಳ ಗ್ರಾಮಸ್ಥರ ಆಗ್ರಹ
(ರಾಜ್ಯ ) ಜಿಲ್ಲೆ

ಹಾಳಾದ ರಸ್ತೆ ದುರಸ್ಥಿಗೆ ಹುಣಶ್ಯಾಳ ಗ್ರಾಮಸ್ಥರ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದ ಕ್ರಾಸ್‌ನಿಂದ ಗುತ್ತಿ ಬಸವಣ್ಣ ಕಾಲುವೆಯವರೆಗಿನ ರಸ್ತೆ ಡಾಂಬರು ಕಾಣದೇ ಸಂಪೂರ್ಣ ಹಾಳಾಗಿದ್ದು ಕೂಡಲೇ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಗ್ರಾಮಸ್ಥರು ಮಂಗಳವಾರ ಪತ್ರಿಕಾ ಹೇಳಿಕೆಯ ಮೂಲಕ ಆಗ್ರಹ ಪಡಿಸಿದ್ದಾರೆ.
ಗ್ರಾಮದಿಂದ ಕಾಲುವೆಯವರೆಗಿನ ೫.೫ ಕಿ.ಮೀ ಸಂಪೂರ್ಣ ಹಾಳಾಗಿದೆ. ಇಲ್ಲಿ ಖಾಸಗಿ ವಾಹನ ಅಥವಾ ದ್ವಿಚಕ್ರವಾಹನಗಳ ಮೂಲಕ ಸಂಚರಿಸುವವರ ಪರಿಸ್ಥಿತಿ ಹೇಳತೀರದಾಗಿದೆ. ತಗ್ಗು ದಿನ್ನೆಗಳಿಂದ ಕೂಡಿದ ರಸ್ತೆಯಲ್ಲಿ ವಾಹನಗಳು ಧೂಳ ಎಬ್ಬಿಸುತ್ತಾ, ತೆವಳುತ್ತಾ ನಿಧಾನವಾಗಿ ಚಲಿಸಿದರೆ, ಅದರಲ್ಲಿ ಕುಳಿತವರು ಬೆಳಿಗ್ಗೆ ಶುಭ್ರಬಟ್ಟೆಗಳೊಂದಿಗೆ ಹೊರಟವರು ಧೂಳುಮಯವಾಗಿ ಮರಳುವಂತಾಗಿದೆ. ಇನ್ನೂ ಆನೆಮಡು, ಸಲಾದಹಳ್ಳಿ, ಚಟ್ನಳ್ಳಿ, ಅಸಂತಾಪೂರ ಗ್ರಾಮಗಳಿಂದ ಪಂಚಾಯಿತಿ ನಿತ್ಯ ಅಗತ್ಯ ಕೆಲಸಗಳಿಗೆ ಬರುವವರು ಸಹ ರಸ್ತೆಯನ್ನು ಕಂಡು ಪಂಚಾಯಿತಿಗೆ ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ.
ಗ್ರಾಮದಿಂದ ಕಲಬುರಗಿ, ಯಾದಗಿರಿ, ಆಲಗೂರ, ಗೋಲಗೇರಿ, ಮಳ್ಳಿ, ಕೆಂಭಾವಿ, ಯಡ್ರಾಮಿ, ಶಹಾಪೂರಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯೇ ಇದಾಗಿದ್ದು ಇಲ್ಲಿ ನಿತ್ಯ ನೂರಾರು ವಾಹನಗಳು, ದ್ವಿಚಕ್ರ ಸವಾರರು ಪ್ರಯಾಣಿಸುತ್ತಾರೆ. ಇವರ ನಿತ್ಯ ಕೆಲಸಗಳಿಗೆ ಹಾಗೂ ಮುಖ್ಯವಾಗಿ ಸುಗಮ ರಸ್ತೆ ಪ್ರಯಾಣಕ್ಕೆ ಸುಸಜ್ಜಿತ ರಸ್ತೆ ಅಗತ್ಯವಾಗಿದೆ.
ಗ್ರಾಮದ ರಸ್ತೆಗೆ ಲೋಕೋಪಯೋಗಿ ಅಧಿಕಾರಿಗಳು, ಕ್ಷೇತ್ರದ ಶಾಸಕರು ಒಂದು ಬಾರಿ ಖುದ್ದಾಗಿ ಬಂದು ರಸ್ತೆಯ ಅನುಭವ ಪಡೆದು ನಂತರವಾದರೂ ರಸ್ತೆ ನಿರ್ಮಿಸಲು ಮುಂದಾಗಬೇಕು ಎಂದು ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಮೈನೂದ್ಧಿನ್ ಬಾಗವಾನ, ಶಫೀಕ್ ಸಿಪಾಯಿ, ಶಂಕ್ರೆಪ್ಪ ಬಂಗಾರಗುಂಡ, ಶಕೀಲ್ ಪೊಲಾಚಿ, ಮಹಮ್ಮದ್ ಬಾಗವಾನ, ಮಾಂತೇಶ ಮುರುಕನಾಳ, ಸುಭಾಸರೆಡ್ಡಿ ದೇಸಾಯಿ, ಶರಣಗೌಡ ಪಾಟೀಲ, ಇಬ್ರಾಹಿಂ ಹವಾಲ್ದಾರ್ ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ

ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ

ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ

ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ
    In (ರಾಜ್ಯ ) ಜಿಲ್ಲೆ
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.