ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಇತ್ತೀಚೆಗೆ ಬೆಂಗಳೂರಿನ ಬಿಡದಿಯಲ್ಲಿರುವ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ದಿ.ಎನ್.ಮುತ್ತಪ್ಪ ರೈ ಅವರ ಮನೆಯ ಹತ್ತಿರ ಕೆಲ ದುಷ್ಕರ್ಮಿಗಳು ಬಂದು, ಎನ್.ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಲ್ಲದೆ ಅವರ ವಾಹನ ಚಾಲಕನ ಮೇಲೂ ಕೂಡ ಗುಂಡಿನ ದಾಳಿ ನಡೆಸಿದ್ದು, ತೀವ್ರ ಖಂಡನೀಯ ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕಾಧ್ಯಕ್ಷ ಸಂತೋಷ ಮನಗೂಳಿ ಹೇಲಿದ್ದಾರೆ.
ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ಈ ಘಟನೆಯಿಂದ ರಾಜ್ಯದ ಜನತೆಯಲ್ಲಿ ಭಯಾನಕ ವಾತವರಣ ನಿರ್ಮಾಣವಾಗಿದೆ. ಅವರ ಮೇಲೆ ದಾಳಿ ನಡೆಸಿದವರಿಗೆ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.