ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ಸೆ.೩೦ ಹಾಗೂ ಅಕ್ಟೊಬರ್ ೧ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಆಯಾ ತಾಲೂಕುಗಳಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡನ್ನು ಕಡ್ಡಾಯವಾಗಿ ತರಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ರಾಜು ಚವ್ಹಾಣ ಮೊ: ೭೦೧೯೧೬೭೨೪೩ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
