ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಚರಿಸಲ್ಪಡುವ ಅಂಬೇಡ್ಕರ್ ಜಯಂತಿ ಅಂಗವಾಗಿ ೨೦೨೪-೨೫ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ೧೦೦ ಕ್ಕೆ ೧೦೦ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಕನ್ನಡ ಮಾಧ್ಯಮದಲ್ಲಿ ಶೇ೯೫% ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲೂಕಿನ ವಿದ್ಯಾರ್ಥಿಗಳಿಗೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಸಾಧನೆ ಮಾಡಿದ ವಿದ್ಯಾರ್ಥಿಗಳು ಎ೨೮ ರ ಒಳಗಾಗಿ ಪರಿಷತ್ತಿನ ಗೌರವ ಕಾರ್ಯದರ್ಶಿ ಸಿದ್ದನಗೌಡ ಬಿಜ್ಜೂರ(೯೭೪೧೬೧೮೨೩೦), ಸಂಘಟನಾ ಕಾರ್ಯದರ್ಶಿ ಹುಸೇನ ಮುಲ್ಲಾ(೯೭೩೧೭೭೨೬೭೭), ಸದಸ್ಯ ಶ್ರೀಶೈಲ ಕತ್ತಿ(೯೬೧೧೨೪೯೩೯೮) ಇವರ ಬಳಿ ವಿವರಗಳನ್ನು ನೀಡುವಂತೆ ಪರಿಷತ್ತಿನ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಪ್ರಕಟಣೆ ನೀಡಿದ್ದಾರೆ.
