Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಣದ್ರಾಕ್ಷಿ ಸಂಗ್ರಹಣೆಗೆ ಕೋಲ್ಡ್ ಸ್ಟೋರೇಜ್ ಕೊರತೆ
(ರಾಜ್ಯ ) ಜಿಲ್ಲೆ

ಒಣದ್ರಾಕ್ಷಿ ಸಂಗ್ರಹಣೆಗೆ ಕೋಲ್ಡ್ ಸ್ಟೋರೇಜ್ ಕೊರತೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾರಾಷ್ಟ್ರದತ್ತ ಮುಖ ಮಾಡುತ್ತಿರುವ ರೈತರು | ಸಾವಳಗಿ ಭಾಗದಲ್ಲಿ ಶೀತಲ ಘಟಕ ಆರಂಭಿಸಬೇಕೆಂಬುದು ರೈತರ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ವರದಿ: ಎಸ್ ಎಮ್ ಇಟ್ಟಿ
ಜಮಖಂಡಿ: ಒಣದ್ರಾಕ್ಷಿ ಸಂಗ್ರಹಣೆಗೆ ಶೀತಲ ಘಟಕಗಳ (ಕೋಲ್ಡ್ ಸ್ಟೋರೇಜ್) ಕೊರತೆ ಇರುವುದರಿಂದ ಬಹುತೇಕ ರೈತರು ಮಹಾರಾಷ್ಟ್ರದತ್ತ ಮುಖ ಮಾಡುತ್ತಿದ್ದಾರೆ. ಈ ಭಾಗದಲ್ಲಿ ವ್ಯಾಪಕ ದ್ರಾಕ್ಷಿ ಬೆಳೆ ಬೆಳೆಯುತ್ತಿದ್ದು, ವಿಜಯಪುರ ಹೊರತುಪಡಿಸಿದರೆ ಸುತ್ತಮುತ್ತ ಯಾವುದೇ ಬೃಹತ್‌ ಶೀತಲ ಘಟಕ ಇಲ್ಲದಿರುವುದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ.
ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಮಧ್ಯೆ ಒಣ ದ್ರಾಕ್ಷಿ ಸಿದ್ಧಪಡಿಸುವುದು ರೈತರಿಗೆ ಸವಾಲಿನ ಕೆಲಸ. ಒಣ ದ್ರಾಕ್ಷಿ ಶೇಖರಿಸಿಡಲು ಶೀತಲ ಘಟಕಗಳ ಕೊರತೆ ಇರುವುದರಿಂದ ಸರ್ಕಾರ ಜಮಖಂಡಿ ತಾಲ್ಲೂಕಿನ ಸಾವಳಗಿ ಭಾಗದಲ್ಲಿ ಒಂದು ಶೀತಲ ಘಟಕ ಆರಂಭಿಸಬೇಕು ಎಂಬುದು ರೈತರ ಒತ್ತಾಯವಾಗಿದೆ.
ಜಮಖಂಡಿ ತಾಲ್ಲೂಕಿನಲ್ಲಿ ಒಟ್ಟು 6,300 ಹೆಕ್ಟೇರ್ ದ್ರಾಕ್ಷಿ ಬೆಳೆಯುವ ರೈತರಿದ್ದಾರೆ, ಅದರಲ್ಲಿ ಶೇ 90ರಷ್ಟು ರೈತರು ಒಣ ದ್ರಾಕ್ಷಿ ತಯಾರಿಸುತ್ತಾರೆ, ಅಂದಾಜು 40 ಸಾವಿರ ಟನ್ ಜಮಖಂಡಿಯಲ್ಲಿ ತಯಾರಾಗುತ್ತದೆ. ಸುತ್ತಮುತ್ತಲಿನಲ್ಲಿ ಖಾಸಗಿಯವರು ಮಾಡಿರುವ ಸಣ್ಣಪುಟ್ಟ ಶೀತಲ ಘಟಕಗಳಲ್ಲಿ ಎರಡು ಸಾವಿರ ಟನ್ ಮಾತ್ರ ಅವಕಾಶವಿದೆ, ಉಳಿದ ಒಣ ದ್ರಾಕ್ಷಿ ಶೇಖರಣೆ ಮಾಡಲು ರೈತರು ವಿಜಯಪುರ, ಮಹಾರಾಷ್ಟ್ರದ ತಾಸಗಾಂಗ, ಸಾಂಗಲಿಯತ್ತ ಮುಖ ಮಾಡುತ್ತಿದ್ದಾರೆ.
ಖಾಸಗಿ ಶೀತಲ ಘಟಕ ಇರುವುದರಿಂದ ಸರಿಯಾಗಿ ತಂಪಾಗುವ ವ್ಯವಸ್ಥೆ ಇಲ್ಲ, ಇದರಿಂದ ತೂಕದಲ್ಲಿ ವ್ಯತ್ಯಾಸವಾಗುತ್ತದೆ. ಪ್ರತಿ ತಿಂಗಳಿಗೆ ಒಂದು ಟನ್ ಒಣದ್ರಾಕ್ಷಿಗೆ ₹800 ರಿಂದ ₹1200 ರವರೆಗೆ ಬಾಡಿಗೆ ತೆಗೆದುಕೊಳ್ಳುತ್ತಾರೆ ಎಂದು ರೈತ ಚನ್ನಪ್ಪ ಚನವೀರ ತಿಳಿಸಿದರು.
ತೊದಲಬಾಗಿಯ ತೋಟಗಾರಿಕಾ ಉತ್ಪಾದಕರ ಸಂಘ ಜಮಖಂಡಿ ಅವರ ಮೂಲಕ ಸರ್ಕಾರಕ್ಕೆ ಶೀತಲ ಘಟಕ ತಯಾರಿಕಾ ಘಟಕ ನೀಡಬೇಕು ಎಂದು ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ತಾಂತ್ರಿಕ ಸಹಾಯಕ ಪ್ರವೀಣ ಗಾಣಗೇರ ತಿಳಿಸಿದರು.

ಜನಪ್ರತಿನಿಧಿಗಳ ಇಚ್ಛಾಸಕ್ತಿ ಕೊರತೆ

‘ಸಾವಳಗಿ ಭಾಗದಲ್ಲಿ ಹೆಚ್ಚು ದ್ರಾಕ್ಷಿ ಬೆಳೆಯು ವುದರಿಂದ 10ಸಾವಿರ ಟನ್ ಸಂಗ್ರಹಿಸುವ ಶೀತಲ ಘಟಕವನ್ನು ಸರ್ಕಾರ ಮುಂಜೂರು ಮಾಡಬೇಕು, ಅಂದಾಜು ₹10ಕೋಟಿ ವೆಚ್ಚದಲ್ಲಿ ಶೀತಲ ಘಟಕ ತಯಾರಾಗುತ್ತದೆ. ಹಲವು ವರ್ಷಗಳಿಂದ ಹೆಚ್ಚುವರಿ ಶೀತಲ ಘಟಕಗಳ ನಿರ್ಮಾಣಕ್ಕೆ ಒತ್ತಡ ಹೇರುತ್ತಿದ್ದೇವೆ. ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳ ಇಚ್ಛಾಸಕ್ತಿ ಕೊರತೆಯಿಂದ ಬೇಡಿಕೆ ಈಡೇರಿಲ್ಲ’ ಎಂದು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಅಸೋಸಿಯೇಷನ್‌ ಅಧ್ಯಕ್ಷ ಅಭಯಕುಮಾರ್‌ ಎಸ್‌.ನಾಂದ್ರೇಕರ್‌ ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.