ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ,ಆಂಗ್ಲ ಮಾಧ್ಯಮ ಸರ್ಕಾರಿ ಮುಸ್ಲಿಂ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೫-೨೬ನೇ ಸಾಲಿನ ೬ನೇ ತರಗತಿ ಪ್ರವೇಶ ಪರೀಕ್ಷೆಯು ವಿಜಯಪುರ, ಮುದ್ದೇಬಿಹಾಳ, ಸಿಂದಗಿ, ಇಂಡಿ ಹಾಗೂ ಚಡಚಣ ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ ೨೭ರ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೦೧ ಗಂಟೆಯವರೆಗೆ ನಡೆಯಲಿವೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು https://domgok.in/Admission/StudentHallticketವೆಬ್‌ಸೈಟ್ ಮೂಲಕ ಎಸ್‌ಎಟಿಎಸ್ ಐಡಿ ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ https:// dom.karnataka.gov.in ಹಾಗೂ ವ್ಯಾಟ್ಸ್ಅಪ್ ಸಂಖ್ಯೆ ೮೨೭೭೭೯೯೯೯೦, ಜಿಲ್ಲೆಯ ಸಂಬAಧಿಸಿದ ವಸತಿ ಶಾಲೆಗಳನ್ನು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.೦೮೩೫೨೨೯೫೫೨೩ ಹಾಗೂ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
