ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಗುರು ಮಹಾಂತೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆಯ ಅಮೃತ ಮಹೋತ್ಸವದಂಗವಾಗಿ ಹಮ್ಮಿಕೊಂಡಿರುವ ಪುರಾಣ ಕಾರ್ಯಕ್ರಮದಲ್ಲಿ ಸೋಮವಾರ ಸಂಜೆ ಜರುಗಿದ ಗುರುರಕ್ಷೆ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿಯ ೭೫ ಪೌರಕಾರ್ಮಿಕರನ್ನು ಶ್ರೀಮಠದಿಂದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಪ್ಪುಗೌಡ ಪಾಟೀಲ, ಮಡಿವಾಳಯ್ಯ ಶಾಸೀಜಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಐ. ರೇವೂರಕರ ಇತರರು ಇದ್ದರು.