ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ೬ನೇ ತರಗತಿಯ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏ.೨೭ರಂದು ಜಿಲ್ಲೆಯ ೧೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುವ್ಯವಸ್ಥಿತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಮುಂಜಾಗ್ರತೆಯಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-೨೦೨೩ರ ಕಲಂ ೧೬೩ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ ಹಾಗೂ ಚಡಚಣ ತಾಲೂಕಿನಲ್ಲಿರುವ ೧೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಸದರಿ ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
