ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ವ್ಯಾಪಕವಾಗಿ ಪ್ರಚುರಪಡಿಸುವ ನಿಟ್ಟಿನಲ್ಲಿ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಯು ಕಲ್ಬುರ್ಗಿ ಜಿಲ್ಲೆಯಿಂದ ಮೋಟರಗಿ ಮಾರ್ಗವಾಗಿ ಏ.೨೫ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ತಿಳಿಸಿದ್ದಾರೆ.
ಜಿಲ್ಲೆಗೆ ರಥಯಾತ್ರೆಗೆ ಆಗಮಿಸಲಿರುವ ಹಿನ್ನಲೆಯಲ್ಲಿ ಅಂದು ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ, ನಂತರ ಜಿಲ್ಲಾಡಳಿತ ವತಿಯಿಂದ ಪೂಜಾ ಕಾರ್ಯಕ್ರಮ ನೆರವೇರಿಸಿ, ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿ ತಿಕೋಟಾ ಮಾರ್ಗವಾಗಿ ಅಥಣಿ ಮೂಲಕ ಬೆಳಗಾವಿ ಜಿಲ್ಲೆಗೆ ರಥಯಾತ್ರೆಯನ್ನು ಬೀಳ್ಕೊಡಲಾಗುತ್ತಿದ್ದು, ಮೆರವಣಿಗೆಯಲ್ಲಿ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
