ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಹಾಗೂ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ದಿನಾಂಕ : ೦೬-೦೫-೨೦೨೫ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
