ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವ ಶಿವಾನಂದ ಪಾಟೀಲ ಅವರು, ಗ್ರಾಮೀಣ ಅಭಿವೃದ್ಧಿ ಸಚಿವರಾಗಿದ್ದ ಸಮಯದಲ್ಲಿ ಸಚಿವರಾಗಿದ್ದ ರಾಮಯ್ಯ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದಾಗ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದ್ದರು. ಇದೇ ಕಾರಣಕ್ಕೆ ಜನತೆ ರಾಮಯ್ಯ ಅವರನ್ನು ನೀರಿನ ರಾಮಯ್ಯ ಎಂದು ಅಭಿಮಾನದಿಂದ ಕರೆಯುತ್ತಿದ್ದರು.
ರಾಮಯ್ಯ ಪ್ರಸ್ತುತ ಸಂದರ್ಭದಲ್ಲಿ ಅವರೊಬ್ಬ ಮಾದರಿ ರಾಜಕಾರಣಿ ಯಾಗಿದ್ದರು ಎಂದು ಸ್ಮರಿಸಿರುವ ಸಚಿವ ಶಿವಾನಂದ ಪಾಟೀಲ ಅವರು, ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ದಯಪಾಲಿಸಲಿ ಹಾಗೂ ಕುಟುಂಬ ವರ್ಗದವರ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

