ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೈಸೂರು ವಿಶ್ವವಿದ್ಯಾಲಯದೊಂದಿಗೆ ಸಂಯೋಜನೆಗೊಂಡಿರುವ ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪ್ರಥಮ ವರ್ಷದ ಪದವಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳ ವಿಶೇಷ ಅಧ್ಯಯನಗಳು ಈ ಪದವಿಯಲ್ಲಿರುತ್ತವೆ.
ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ htts://uucms.karnataka.gov.in CxÀªÁ https://www.cavamysore.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಕಚೇರಿ ದೂರವಾಣಿ ಸಂಖ್ಯೆ ೦೮೨೧-೨೪೩೮೯೩೧ಗೆ ಸಂಪರ್ಕಿಸಬಹುದಾಗಿದೆ ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
