Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಇನ್ನಿಲ್ಲ!
(ರಾಜ್ಯ ) ಜಿಲ್ಲೆ

ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಇನ್ನಿಲ್ಲ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರಿನಲ್ಲಿ ನಿಧನ | ಏ.27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಮತ್ತು ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು.
‘ಕಸ್ತೂರಿರಂಗನ್ ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
NEPಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಅಲ್ಲದೆ, ರಾಜ್ಯಸಭೆಯ ಸದಸ್ಯರಾಗಿ (2003-09) ಮತ್ತು ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಸ್ತೂರಿರಂಗನ್ 2004ರ ಏಪ್ರಿಲ್ ನಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್‌ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾಗಿದ್ದರು.
ಬಾಹ್ಯಾಕಾಶ ವಿಜ್ಞಾನಿಯಾಗಿ ಅವರ ಕೊಡುಗೆಯ ಜೊತೆಗೆ, ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸಂರಕ್ಷಣೆ (2013) ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (2020) ಕುರಿತ ಅವರ ವರದಿಗಳು ಮಹತ್ವದ್ದಾಗಿವೆ.
2013ರಲ್ಲಿ ಸಲ್ಲಿಸಲಾದ ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿಯು ಪಶ್ಚಿಮ ಘಟ್ಟಗಳ ಶೇ 37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಪ್ರಸ್ತಾಪಿಸಿದೆ. NEP 2020 ಅನ್ನು ರಚಿಸಿದ ಕಸ್ತೂರಿರಂಗನ್ ಸಮಿತಿಯು ಶಿಕ್ಷಣ ವ್ಯವಸ್ಥೆಯಲ್ಲಿ ಪ್ರವೇಶ, ಸಮಾನತೆ, ಗುಣಮಟ್ಟ, ಕೈಗೆಟುಕುವಿಕೆ ಮತ್ತು ಹೊಣೆಗಾರಿಕೆಯ ಮೇಲೆ ಕೇಂದ್ರೀಕರಿಸಿ ಹಲವಾರು ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸಿತ್ತು.

ಪ್ರಶಸ್ತಿ ಪುರಸ್ಕಾರಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳಿಗಾಗಿ ಕಸ್ತೂರಿರಂಗನ್ ಅವರಿಗೆ ಎಂಜಿನಿಯರಿಂಗ್‌ನಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಏರೋಸ್ಪೇಸ್‌ನಲ್ಲಿ ಡಾ. ವಿಕ್ರಮ್ ಸಾರಾಭಾಯ್ ಪ್ರೇರಿತ್ ಪ್ರಶಸ್ತಿ, ಖಗೋಳಶಾಸ್ತ್ರದಲ್ಲಿ ಎಂಪಿ ಬಿರ್ಲಾ ಸ್ಮಾರಕ ಪ್ರಶಸ್ತಿ, ಅನ್ವಯಿಕ ವಿಜ್ಞಾನದಲ್ಲಿ ಎಂಎಂ ಚುಗನಿ ಸ್ಮಾರಕ ಪ್ರಶಸ್ತಿ, ವಿಜ್ಞಾನದಲ್ಲಿ ಎಚ್‌ಕೆ ಫಿರೋದಿಯಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. ಅಷ್ಟೇ ಅಲ್ಲದೆ, ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಕೂಡ ಬಂದಿವೆ. ಖಗೋಳಶಾಸ್ತ್ರ, ಬಾಹ್ಯಾಕಾಶ ವಿಜ್ಞಾನ, ಬಾಹ್ಯಾಕಾಶ ಅಪ್ಲಿಕೇಷನ್ಸ್‌ಗಳ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಕಸ್ತೂರಿರಂಗನ್ ಅವರ 200ಕ್ಕೂ ಹೆಚ್ಚು ಪ್ರಬಂಧಗಳು ಪ್ರಕಟವಾಗಿವೆ.

ಡಾ.ಕಸ್ತೂರಿರಂಗನ್ ದೇದೀಪ್ಯಮಾನ ನಕ್ಷತ್ರ :ಶಹಾಪುರ

ಸುಪ್ರಸಿದ್ದ ಅಂತರಿಕ್ಷ ವಿಜ್ಞಾನಿ ಡಾ.ಕಸ್ತೂರಿರಂಗನ್ ಅವರ ದೇಹಾವಸಾನದಿಂದ ಭಾರತದ ರಾಷ್ಟ್ರಜೀವನದಲ್ಲಿ ಒಂದು ದೇದೀಪ್ಯಮಾನ ನಕ್ಷತ್ರದ ಅಸ್ತಂಗತವಾಗಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಅರುಣ್ ಶಹಾಪುರ ಕಂಬನಿ ಮಿಡಿದಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ವಿಜ್ಞಾನಿ, ನೀತಿ ನಿರ್ಮಾತೃ, ಶಿಕ್ಷಣತಜ್ಞ, ಪರಿಸರತಜ್ಞ ಹೀಗೆ ಹಲವು ಭೂಮಿಕೆಗಳಲ್ಲಿ ಪ್ರಭಾವಿಯಾಗಿ ಕಾರ್ಯನಿರ್ವಹಿಸಿದ ಡಾ.ಕಸ್ತೂರಿರಂಗನ್ ಅವರು ಉದಾತ್ತ ಮಾನವತಾವಾದಿ ಮತ್ತು ಸಂವೇದನಾಶೀಲ ವ್ಯಕ್ತಿಯಾಗಿದ್ದರು.
ಡಾ| ಕಸ್ತೂರಿ ರಂಗನ್ ವಿಜಯಪುರ ಜಿಲ್ಲೆ ಸಿಂದಗಿಯ ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನವು ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರೇರಿತ ಪೂಜ್ಯ ಪ್ರಭು ಸಾರಂಗದೇವ ಶಿವಾಚಾರ್ಯರು ನೇತೃತ್ವದಲ್ಲಿ ಭಾಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿ ಪ್ರಶಸ್ತಿ ಸ್ವೀಕರಿಸಿದ್ದು ಇಲ್ಲಿ ಸ್ಮರಿಸಬಹುದು.

“ಬಾರತದ ಹೆಮ್ಮೆಯ ವಿಜ್ಞಾನಿ ಪದ್ಮವಿಭೂಷಣ ಡಾ. ಕೆ.ಕಸ್ತೂರಿರಂಗನ್ ಅವರ ಅಗಲಿಕೆಯ ಸುದ್ದಿ ದುಃಖ ತರಿಸಿದೆ. ಇಸ್ರೊ ಅಧ್ಯಕ್ಷರಾಗಿ, ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಅವರು ಸಲ್ಲಿಸಿದ ಸೇವೆಯಿಂದಾಗಿ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಯಿತು. ಅವರ ಅಗಲಿಕೆಯಿಂದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.”

– ಡಾ ಎಂ.ಬಿ.ಪಾಟೀಲ
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು

“ಬಾಹ್ಯಾಕಾಶ ಕ್ಷೇತ್ರದಲ್ಲಿ ಬಾರತದ ಹೆಸರು ಉತ್ತುಂಗಕ್ಕೆರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಕೆ.ಕಸ್ತೂರಿರಂಗನ್ ಅವರ ನಿಧನದಿಂದಾಗಿ ದೇಶ ಓರ್ವ ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿಯನ್ನು ಕಳೆದುಕೊಂಡು ಬಡವಾದಂತಾಗಿದೆ. ಕರ್ನಾಟಕ ಜ್ಞಾನ ಮಂಡಳಿ ಅಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ಅವರು ಮಹತ್ವದ ಕೊಡುಗೆ ನೀಡಿದ್ದ
ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವೆ.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.