ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತಾಲೂಕಿನ ಕತ್ನಳ್ಳಿ ಗ್ರಾಮದಲ್ಲಿ ಶನಿವಾರ 7 ನೇ ಸುತ್ತಿನ ಕಾಲುಬಾಯಿ ಜ್ವರ ಮತ್ತು ಚರ್ಮ ಗಂಟು ರೋಗ, ಲಸಿಕಾ ಕಾರ್ಯಕ್ರಮದ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ವಿಜಯಪುರ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಗ್ರಾಮದ ಗಣ್ಯರ ಸಮ್ಮುಖದಲ್ಲಿ, ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಲಸಿಕಾ ಕಾರ್ಯಕ್ರಮದ ಪ್ರಯೋಜನಗಳ ಕುರಿತು ಡಾ.ಬಸವರಾಜ್ ಕನಮಡಿ ಗ್ರಾಮಸ್ಥರಿಗೆ ವಿವರಿಸಿದರು.
ಈ ವೇಳೆ ಡಾ.ಸುಜಾತ ಪಾಟೀಲ್, ಡಾ.ಬಂಡಿ, LDO ಮನಗುಳಿ, ಹಿರಿಯ ಪಶುವೈದ್ಯಕೀಯ ಪರೀಕ್ಷಕ ಜುಮ್ಮನಾಳ, ಗಂಗನಲ್ಲಿ, ಸೂರ್ಯವಂಶಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

