ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ, ಮುತ್ತ ಕೊಳಚೆ ನೀರು ನಿಲ್ಲದಂತೆ ಜಾಗೃತಿವಹಿಸುವುದು, ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸುವುದು ಹಾಗೂ ಸೊಳ್ಳೆ ಕಡಿತಕ್ಕೆ ಒಳಗಾಗದಂತೆ ರಕ್ಷ ಣೆ ಮಾಡಿಕೊಳ್ಳುವುದರಿಂದ ಮಲೇರಿಯಾ ರೋಗವನ್ನು ತಡೆಗಟ್ಟಬಹುದು ಎಂದು ತಂಗಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂಗಮೇಶ ದಶವಂತ್ ಹೇಳಿದರು.
ಪಟ್ಟಣದ ಹೊರಪೇಟೆ ಗಲ್ಲಿಯಲ್ಲಿರುವ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಲೇರಿಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಹರಿಯದೆ ನಿಂತುಕೊಳ್ಳುವ ಕೊಳಚೆ ನೀರು, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಇಲ್ಲದ ಸ್ಥಳಗಳಲ್ಲಿ ಮಲೇರಿಯಾ ಹರಡುವ ಸೊಳ್ಳೆಗಳು ಉತ್ಪಪತ್ತಿಯಾಗುತ್ತವೆ. ಸೊಳ್ಳೆ ಒಬ್ಬನಿಂದ ಮತ್ತೊಬ್ಬನಿಗೆ ಕಡಿಯುವ ಮೂಲಕ ಸಾಂಕ್ರಾಮಿಕವಾಗಿ ಬರುತ್ತದೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಗೆ ಚಳಿ-ಜ್ವರ ಬರುವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಹೀಗಾದಾಗ ಕೂಡಲೇ ಹತ್ತಿರದಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವುದರ ಜೊತೆಗೆ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ತಾಲೂಕು ಕ್ಷೆತ್ರ ಆರೋಗ್ಯ ಶಿಕ್ಷ ಣಾಧಿಕಾರಿ ಅನುಸೂಯಾ ತೇರದಾಳ ಮಾತನಾಡಿ, ಮನೆ ಸುತ್ತಲಿನ ಪರಿಸರ ಸ್ವಚ್ಚವಾಗಿಟ್ಟುಕೊಳ್ಳುವುದರ ಜೊತೆಗೆ ಮನೆಯಲ್ಲಿ ಮತ್ತು ಮನೆ ಸುತ್ತಮುತ್ತ ಸೊಳ್ಳೆಗಳು ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಸೊಳ್ಳೆಗಳ ಸಂತತಿ ಕಡಿಮೆ ಮಾಡಲು ಪರಿಸರದಲ್ಲಿ ಹಾಗೂ ಮನೆಯ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸ್ವಯಂ ರಕ್ಷ ಣಾ ವಿಧಾನಗಳಾದ ಸೊಳ್ಳೆ ಪರದೆ, ಬೇವಿನ ಸೊಪ್ಪಿನ ಹೊಗೆ, ಸೊಳ್ಳೆ ಬತ್ತಿ ಹಾಗೂ ಸೊಳ್ಳೆ ಬ್ಯಾಟ್ ಮುಖಾಂತರ ಸೊಳ್ಳೆಗಳನ್ನು ನಿಯಂತ್ರಿಸಬಹುದು ಎಂದರು.
ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮಲೇರಿಯಾ ದಿನಾಚರಣೆಯ ಕುರಿತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಲೇರಿಯಾ ನಿಯಂತ್ರಣ ಘೋಷಣೆಗಳನ್ನು ಕೂಗುತ್ತಾ ಜಾಥಾ ನಡೆಸಿದರು. ಕಾರ್ಯಕ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಚಲವಾದಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ, ಎಸ್.ಎಸ್. ಸಜ್ಜನ, ಇಸ್ಮಾಯಿಲ್ ವಾಲಿಕಾರ, ತಾಲೂಕ ವ್ಹಿ ಬಿ ಡಿ ಮೇಲ್ವಿಚಾರಕ ಎಸ್.ಸಿ.ರುದ್ರವಾಡಿ,
ಮಲ್ಲಿಕಾರ್ಜುನ ಹೆಬ್ಬಾಳ, ಎಂ.ಎಲ್.ನದಾಪ್ ಹಾಗೂ ಆಶಾ ಮೇಲ್ವಿಚಾರಕಿ ಪ್ರಶಿಭಾರಾಣಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

