Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾವರ್ಕರ್, ಗೋಲ್ವಾಲ್ಕರ್ ಸಂವಿಧಾನದ ವಿರುದ್ಧ ಇದ್ದವರು :ಸಿಎಂ
(ರಾಜ್ಯ ) ಜಿಲ್ಲೆ

ಸಾವರ್ಕರ್, ಗೋಲ್ವಾಲ್ಕರ್ ಸಂವಿಧಾನದ ವಿರುದ್ಧ ಇದ್ದವರು :ಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.
ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ.ಆದರೆ ಈಗ ಇವರು ನಮಗೆ ದೇಶ ಭಕ್ತಿ ಬಗ್ಗೆ ಮಾತನಾಡುತ್ತಾರೆ ಎಂದರು.
ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಒಡೆಯಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ತಿಳಿಸಿದರು.
ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್.ಎಸ್.ಎಸ್ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಹಿಷ್ಣುತೆ ಹಾಗೂ ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ ಎಂದರು.
ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು” ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ದೊರೆತದ್ದು ಸಾರ್ಥಕ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದು ತಿಳಿಸಿದರು.
ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು, ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರವಿರಲಿ.
ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು

“ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ. ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಇಂಥಾ ವಿಷಯಗಳಲ್ಲಿ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದರು.
ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಎತ್ತಿ ಹಿಡಿದು, ಇದು ಸಂವಿಧಾನ ಬದ್ಧವಾಗಿದೆ ಎಂದು ಹೇಳಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ.”

– ಸಿದ್ದರಾಮಯ್ಯ
ಮುಖ್ಯಮಂತ್ರಿಗಳು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.