ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಾಗರ ಜೀ ಬಣ ( ರಿ.) ಗ್ರಾಮ ಶಾಖೆ ಕೋರವಾರ. ತಾ- ದೇವರ ಹಿಪ್ಪರಗಿ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ 134 ನೇ ಜಯಂತ್ಯೋತ್ಸವ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಲಮೇಲ ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಲಮೇಲ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ ಅವರ ಸುಧೀರ್ಘ ಶೈಕ್ಷಣಿಕ, ಸಂಘಟನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಸಮಾರಂಭದಲ್ಲಿ ಶಾಸಕ ರಾಜುಗೌಡ ಪಾಟೀಲ ಸೇರಿದಂತೆ ಗಣ್ಯಮಾನ್ಯರಿದ್ದರು.

