Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬದುಕಿನ ದಾರಿ ತೋರಿಸುವ ವಚನಗಳು :ಶಾಸಕ ಸಿದ್ದು ಸವದಿ
(ರಾಜ್ಯ ) ಜಿಲ್ಲೆ

ಬದುಕಿನ ದಾರಿ ತೋರಿಸುವ ವಚನಗಳು :ಶಾಸಕ ಸಿದ್ದು ಸವದಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಕಾಯಕವೇ ನಾಯಕ ಎಂಬ ಸಂದೇಶ ಕೊಟ್ಟಿರುವ ಬಸವಣ್ಣನವರು ಇಂದಿನ ಯುವಕರಿಗೆ ನಾಯಕನಾಗಬೇಕು. ಆದ್ದರಿಂದ ಸಂಪತ್ತಿನ ಬೆನ್ನು ಹತ್ತಿ ಸಂತಸ ಕಳೆದುಕೊಳ್ಳಬಾರದು. ಜೀವನದ ಸತ್ಯವನ್ನು ಅರ್ಥಮಾಡಿಕೊಳ್ಳಬೇಕು ಎಂದು ಓಲೇಮಠದ ಆನಂದ ದೇವರು ಶ್ರೀಗಳು ಹೇಳಿದರು.
ಜಮಖಂಡಿ ನಗರದ ಐತಿಹಾಸಿಕ ಓಲೇಮಠದ ಆಶ್ರಯದಲ್ಲಿ ಬಸವ ಜಯಂತಿ ನಿಮಿತ್ತ ಏ.15 ರಿಂದ ಏ.29 ರವರೆಗೆ ಹಮ್ಮಿಕೊಂಡಿರುವ ಶರಣರ ವಚನ ಪ್ರವಚನ ಮತ್ತು ಸದ್ಭಾವನಾ ಪಾದಯಾತ್ರೆ ಅಂಗವಾಗಿ ಹತ್ತನೆ ದಿನವಾದ ಗುರುವಾರ ಸಂಜೆ ನಡೆದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಝುಂಜರವಾಡದ ಬಸವರಾಜೇಂದ್ರ ಶರಣರು ಪ್ರವಚನ ನುಡಿ ಹಂಚಿಕೊಳ್ಳುತ್ತ ಮಾತನಾಡಿ, ಭಗವಂತನ ಮೇಲಿನ ನಂಬಿಕೆಯ ಕೊರತೆಯಿಂದ ನರಕ ಸೃಷ್ಟಿ ಮಾಡಿಕೊಳ್ಳಬಾರದು. ಪವಿತ್ರವಾದ ನಂಬಿಕೆ ಅಂತಃಕರಣದಲ್ಲಿದ್ದರೆ ದುಃಖವಿಲ್ಲ, ನೋವಿಲ್ಲ. ಬದಲಾಗಿ ಏನೆಲ್ಲ ಸಾಧಿಸಬಹುದು ಎಂದರು.
ತೇರದಾಳ ಶಾಸಕ ಸಿದ್ದು ಸವದಿ ಮುಖ್ಯ ಅತಿಥಿಯಾಗಿ ಮಾತನಾಡಿ, ಬಸವಾದಿ ಶಿವಶರಣರ ಪ್ರತಿಯೊಂದು ವಚನವೂ ಬದುಕಿನ ದಾರಿಯನ್ನು ತೋರಿಸುತ್ತವೆ. ಬದುಕನ್ನು ಕಟ್ಟಿಕೊಳ್ಳಲು ಒಂದೇ ಒಂದು ವಚನ ಸಾಕು. ಸಮಾಜದಲ್ಲಿ ತಾಂಡವವಾಡುತ್ತಿರುವ ಅಸ್ಪೃಶ್ಯತೆಯನ್ನು ತೊಡೆದು ಹಾಕಲು ಬಸವಣ್ಣನವರ ಅನೂಯಾಯಿಗಳಾಗಿ ಕೆಲಸ ಮಾಡಬೇಕು ಎಂದರು.
ಆಲಗೂರಿನ ಧರಿದೇವರ ಮಠದ ಲಕ್ಷ್ಮಣಮುತ್ಯಾ, ಕಲ್ಯಾಣ ಮಠದ ಗೌರಿಶಂಕರ ಶ್ರೀಗಳು, ಮರುಳರಾಧ್ಯ ದೇವರು ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ನಾಗಪ್ಪ ಸನದಿ, ವಕೀಲ ಸಿ.ಎಸ್. ಬಾಂಗಿ, ಪ್ರಾಚಾರ್ಯೆ ಡಾ.ಸುನಂದ ಶಿರೂರ, ಮಹಾದೇವ ಇಟ್ಟಿ, ಕಲ್ಲಯ್ಯ ಮಠಪತಿ, ಅಲಕಾ ಮಾಳಗಿ, ಗಿರಿಜಾ ಮೈತ್ರಿ, ಸಂಗಪ್ಪ ದಡ್ಡಿಮನಿ, ಬಸವರಾಜ ಹೊಳೆಪ್ಪಗೋಳ, ನಗರಸಭೆ ಸದಸ್ಯೆ ಬಂದವ್ವ ಅರಕೇರಿ, ರಾಮು ಕಾಖಂಡಕಿ, ಸದಾಶಿವ ಲಾಲಸಂಗಿ, ಸಹನಾ ದಳವಾಯಿ, ಅನಿತಾ ಕಕಮರಿ, ಗಿರಿಜಾ ಬಡ್ಡೂರ, ರೇಖಾ ತೆಲಬಕ್ಕನವರ ಇದ್ದರು.
ರಶ್ಮಿ ರೊಟ್ಟಿ ಭರತನಾಟ್ಯ ಪ್ರದರ್ಶಿಸಿದರು. ಅಂತಾರಾಷ್ಟ್ರೀಯ ಖ್ಯಾತಿಯ ನೃತ್ಯಗಾರ್ತಿ ಸಹನಾ ಹುನಗುಂದ ಪೌರಾಣಿಕ ಕಥೆಯ ನೃತ್ಯ ಪ್ರದರ್ಶಿಸಿದರು. ಬಸವ ಕೇಂದ್ರದ ದೀಪಾ ಯಡಹಳ್ಳಿ ಹಾಗೂ ಸದಸ್ಯೆಯರು ಕ್ರಾಂತಿಗೀತೆ ಹಾಡಿದರು.
ಸರಸ್ವತಿ ಸಬರದ, ಸೌಂದರ್ಯ ಜಕಾತಿ ಪ್ರಾರ್ಥನೆ ಗೀತೆ ಹಾಡಿದರು. ಗದುಗಿನ ಗವಾಯಿ ರವಿಕುಮಾರ ಬೆಣ್ಣಿ, ತಬಲಾವಾದಕ ಹನಮಂತ ಅಂಕದ ಸಂಗೀತ ಸೇವೆ ಸಲ್ಲಿಸಿದರು. ಚಂದ್ರಶೇಖರ ಜತ್ತಿ ಸ್ವಾಗತಿಸಿದರು. ಶಿವಲೀಲಾ ಲಿಗಾಡಿ ನಿರೂಪಿಸಿದರು. ಶಿವಾನಂದ ಕೊಣ್ಣೂರ ವಂದಿಸಿದರು.

“ಬಸವಾದಿ ಶಿವಶರಣರು ಪ್ರತಿಪಾದಿಸಿದ್ದ ಶರಣ ಸಂಸ್ಕೃತಿ ಮತ್ತು ಶರಣ ಧರ್ಮವು ಜಗತ್ತಿನಾದ್ಯಂತ ಪ್ರಸಾರ ಮಾಡುವ ಹೊಣೆಯನ್ನು ಇಂದಿನ ಪೀಳಿಗೆ ನಿಭಾಯಿಸಬೇಕು. ಯಾವುದೇ ತಾರತಮ್ಯವಿಲ್ಲದೆ ಜೀವನ ಮಾಡಲು ಶರಣ ಸಂಸ್ಕೃತಿಯನ್ನು ಮತ್ತೆ ಮರಳಿ ತರಲು ಶ್ರಮಿಸಬೇಕು.”

– ಶ್ವೇತಾ ಬೀಡಿಕರ
ಉಪ ವಿಭಾಗಾಧಿಕಾರಿಗಳು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.