ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕು ಕೊಣ್ಣೂರ ಗ್ರಾಮದ ಸಂದೀಪ ಹೊಸಮನಿ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎ೨೫ ರಂದು ನಾಲತವಾಡದ ಕಾಲೇಜಿನಿಂದ ವಿಜಯಪುರಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವನು ಮರಳಿ ಮನೆಗೆ ಬರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾನೆ ಎಂದು ಸಂದೀಪನ ಸಹೋದರಿ ಸೌಮ್ಯ ಪೂಜಾರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
