ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ನಿವಾಸಿ, ಕರ್ನಾಟಕ ರಣಧೀರ ಪಡೆಯ ಉತ್ತರ ಕರ್ನಾಟಕ ಅಧ್ಯಕ್ಷರಾದ ಸಂತೋಷ ಮಣಿಗೀರಿ ಅವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಇತ್ತೀಚೆಗೆ ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

