Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನಗಳಲ್ಲಿ ಜೀವನ ಮೌಲ್ಯಗಳಿವೆ :ಕಲ್ಯಾಣಶೆಟ್ಟಿ
(ರಾಜ್ಯ ) ಜಿಲ್ಲೆ

ವಚನಗಳಲ್ಲಿ ಜೀವನ ಮೌಲ್ಯಗಳಿವೆ :ಕಲ್ಯಾಣಶೆಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಾದಿ ಶರಣರ ವಚನಗಳಲ್ಲಿ ಜೀವನಕ್ಕೆ ಬೇಕಾದ ಜೀವನ ಮೌಲ್ಯಗಳಿವೆ. ಶರಣರ ವಚನಗಳನ್ನು ಓದುವುದರ ಮೂಲಕ ಅದರಲ್ಲಿನ ತತ್ವಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದರು.
ಪಟ್ಟಣದ ಬಸವೇಶ್ವರ ದೇವಾಲಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೋಣೆಯಲ್ಲಿ ಬಸವಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರ ಬಸವಜಯಂತಿಯಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ವಚನ ಕಂಠಪಾಠ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಸಮಸ್ಯೆಗೆ ಪರಿಹಾರ ಮತ್ತು ಆದರ್ಶ ಬದುಕಿನ ಮೌಲ್ಯ ವಚನ ಸಾಹಿತ್ಯದಲ್ಲಿದೆ. ಶರಣರ ವಚನ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಲು ಯತ್ನಿಸಿದಾಗ ಜೀವನದಲ್ಲಿ ಶಾಂತಿ-ನೆಮ್ಮದಿ, ಸಾರ್ಥಕತೆ ಕಾಣಲು ಸಾಧ್ಯ. ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಲು ವಚನ ಕಂಠಪಾಠ ಸೇರಿದಂತೆ ಬಸವಾದಿ ಶರಣರ ವಚನಗಳ ಕುರಿತ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡುವದು ಅಗತ್ಯವಿದೆ. ಹಿಂದೆ ನಾವು ಈ ನೆಲದಲ್ಲಿ ವಚನ ಕಂಠಪಾಠ ಸ್ಪರ್ಧೆಗಳನ್ನು ಮಾಡುತ್ತಿದ್ದವು. ಈಚೆಗೆ ಇದು ಕೆಲ ಕಾರಣಗಳಿಂದ ಸ್ಥಗಿತವಾಗಿತ್ತು. ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಽಕಾರದ ಆಯುಕ್ತರ ಗಮನಕ್ಕೆ ತಂದಾಗ ಅವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಲು ಅವಕಾಶ ನೀಡಿದರು. ಈ ಸ್ಪರ್ಧೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವಂತಾಗಬೇಕೆಂದರು.
ಬಸವೇಶ್ವರ ಸೇವಾ ಸಮಿತಿಯ ಸದಸ್ಯ, ನಿವೃತ್ತ ಶಿಕ್ಷಕ ಎಂ.ಜಿ.ಆದಿಗೊಂಡ ಮಾತನಾಡಿ, ೧೨ನೇ ಶತಮಾನದಲ್ಲಿ ವಿಶ್ವಗುರು ಬಸವೇಶ್ವರರು ಅನುಭವ ಮಂಟಪ ಸ್ಥಾಪಿಸುವ ಮೂಲಕ ಜಗತ್ತಿಗೆ ಸಮಾನತೆ ಸಂದೇಶ ನೀಡಿದರು. ಈ ಮೂಲಕ ಅನುಭವ ಮಂಟಪವು ಜಗತ್ತಿನ ಪ್ರಪ್ರಥಮ ಸಂಸತ್ತು ಎಂಬ ಕೀರ್ತಿಗೆ ಭಾಜನವಾಗಿದೆ. ಧಾರ್ಮಿಕ ಕ್ರಾಂತಿ ಗೈಯುವ ಮೂಲಕ ಜನರಲ್ಲಿ ಧಾರ್ಮಿಕ ಪ್ರeಯನ್ನು ಮೂಡಿಸಿದರು. ಬಸವೇಶ್ವರರು ಸೇರಿದಂತೆ ಅನೇಕ ಶರಣರು ವಚನಗಳನ್ನು ಬರೆಯುವ ಮೂಲಕ ತಮ್ಮ ಅನುಭಾವ ನೀಡಿದ್ದಾರೆ. ಬಾಲ್ಯದಲ್ಲಿ ಮಕ್ಕಳಿಗೆ ವಚನಗಳನ್ನು ಓದಿಸುವ ರೂಢಿಸಿದರೆ ಉತ್ತಮ ಸಂಸ್ಕಾರ ಪಡೆದು ಸಾರ್ಥಕ ಜೀವನ ತಮ್ಮದಾಗಿಸಿಕೊಳ್ಳುತ್ತಾರೆ. ವಚನ ಕಂಠಪಾಠ ಸ್ಪರ್ಧೆಯ ಆಯೋಜನೆ ಸ್ವಾಗತಾರ್ಹ ಎಂದರು.
ನಿರ್ಣಾಯಕರಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಪಿ.ಎಲ್.ಹಿರೇಮಠ ಮಾತನಾಡಿದರು.
ವೇದಿಕೆಯಲ್ಲಿ ನಿರ್ಣಾಯಕರಾಗಿ ಆಗಮಿಸಿದ್ದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಪ್ರಭಾಕರ ಖೇಡದ, ಬಸವೇಶ್ವರ ದೇವಾಲಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಯಮನಪ್ಪ ಮಿಣಜಗಿ ಇದ್ದರು.
ನಿರ್ಣಾಯಕರಾಗಿ ಆಗಮಿಸಿದ್ದ ಶಿಕ್ಷಕ ಬಸವರಾಜ ನಂದಿಹಾಳ ಸ್ವಾಗತಿಸಿ, ನಿರೂಪಿಸಿದರು. ವಚನ ಕಂಠಪಾಠ ಸ್ಪರ್ಧೆಯಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ೨೦ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ, ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಏ.೩೦ ರಂದು ಸಂಜೆ ೫ ಗಂಟೆಗೆ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಾಧಿಕಾರವು ಬಸವೇಶ್ವರ ಜಯಂತಿ ಉತ್ಸವದಂಗವಾಗಿ ಹಮ್ಮಿಕೊಂಡಿರುವ ವಚನ ಚಿಂತನ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಸ್ಪರ್ದಾರ್ಥಿಗಳಿಗೆ ವಚನ ವ್ಯಕ್ತಿತ್ವ ವಿಕಸನ ಕಿರುಪುಸ್ತಕವನ್ನು ವಿವೇಕಾನಂದ ಕಲ್ಯಾಣಶೆಟ್ಟಿ ವಿತರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.