Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶೇಷಚೇತನ-ಹಿರಿಯ ನಾಗರೀಕರಿಗೆ ಉಚಿತ ಸಲಕರಣೆ ವಿತರಣೆ
(ರಾಜ್ಯ ) ಜಿಲ್ಲೆ

ವಿಶೇಷಚೇತನ-ಹಿರಿಯ ನಾಗರೀಕರಿಗೆ ಉಚಿತ ಸಲಕರಣೆ ವಿತರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸಾಮಾಜಿಕ ಅಧಿಕಾರಿತ ಶಿವಿರ್ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ರಮೇಶ ಜಿಗಜೀಣಗಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಶೇಷ ಚೇತನರು ಕೂಡ ಸಾಮಾನ್ಯರಂತೆ ಬದುಕುವ ಬಯಕೆಯಿರುತ್ತದೆ ಎಂಬುದನ್ನು ಸಮಾಜದ ಇತರರು ಅರಿತು ಅವರ ಬೆಳವಣಿಗೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ವಿಶೇಷಚೇತನರ ಸಬಲೀಕರಣಕ್ಕಾಗಿ ಉಚಿತವಾಗಿ ಸಾಧನ ಸಲಕರಣೆಯನ್ನು ನೀಡಲಾಗುತ್ತಿದೆ ಎಂದು ಸಂಸದರಾದ ರಮೇಶ ಜಿಗಜೀಣಗಿ ಹೇಳಿದರು.
ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ್ ರಂಗ ಮಂದಿರದಲ್ಲಿ ಮಂಗಳವಾರ ಭಾರತ ಸರ್ಕಾರ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ, ಅಲಿಂಕೋ, ಜಿಲ್ಲಾಡಳಿತ, ಜಿಲ್ಲಾಪಂಚಾಯತಗಳ ಸಂಯುಕ್ತಾಶ್ರಯದಲ್ಲಿ ವಿಶೇಷಚೇತನ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಿಸುವ ಭಾರತ ಸರ್ಕಾರದ ಅಡಿಪ್ ಯೋಜನೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಸಾಮಾಜಿಕ ಅಧಿಕಾರಿತ ಶಿವಿರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷಚೇತನರಿಗಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು ತಾವುಗಳು ಮಾತ್ರ ಸಮರ್ಪಕವಾಗಿ ಉಪಯೋಗಿಸುವಂತಾಗಬೇಕು ಅಧಿಕಾರಿಗಳು ಕೂಡ ಅರ್ಹತೆ ಹೊಂದಿದವರಿಗೆ ಮಾತ್ರ ಸಾಧನ ಸಲಕರಣಗಳು ದೊರೆಯುವಂತೆ ಕ್ರಮ ವಹಿಸಬೇಕು ಯೋಜನೆಗಳ ಫಲಾನುಭವಿಗಳು ಸಾಧನ ಸಲಕರಣೆಗಳನ್ನು ಸದುಪಯೋಗ ಪಡೆದುಕೊಂಡು ಮುಖ್ಯ ವಾಹಿನಿಗೆ ಬರುವಂತೆ ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿಶೇಷ ಚೇತನರಿಗೆ ಇರುವ ಸಮಸ್ಯೆಗಳನ್ನು ಗುರುತಿಸಿ ಅಗತ್ಯವಾದ ಸಾಧನ ಸಲಕರಣೆಗಳನ್ನು ನೀಡಿ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಯೋಜನೆಗಳು ಫಲಾನುಭವಿಗಳಿಗೆ ಸಹಕಾರಿಯಾಗಿವೆ. ಜಿಲ್ಲೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಬಡ ವಿಶೇಷಚೇತನ ಮಕ್ಕಳಿಗಾಗಿ ವಿಶೇಷ ಶಾಲೆ ನಿರ್ಮಾಣ ಹಂತದಲ್ಲಿದ್ದು ಮುಂದಿನ ವರ್ಷ ಕಾರ್ಯಾರಂಭ ಮಾಡಲಿದೆ. ಇಲ್ಲಿ ವಿಶೇಷ ಚೇತನ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ನೀಡಲಾಗುವುದು ಜಿಲ್ಲೆಯಲ್ಲಿರುವ ವಿಶೇಷ ಚೇತನ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ವಿಶೇಷಚೇತನರ ಇಲಾಖೆಯ ಸಹಾಯಕ ನಿರ್ದೇಶಕರಾದ ಸವಿತಾ ಕಾಳೆ ಮಾತನಾಡಿ ವಿಜಯಪುರ ಹಾಗೂ ಬಸವನ ಬಾಗೇವಾಡಿ ತಾಲೂಕಿನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅರ್ಹ ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ ಚವ್ಹಾಣ, ಅಲಿಂಕೋ ಡೆಪ್ಯೂಟಿ ಮ್ಯಾನೇಜರ ಶಿವುಕುಮಾರ, ವಿಶೇಷ ಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸಂಸ್ಥೆಗಳು, ಪಾಲಕ ಪೋಷಕರ ಒಕ್ಕೂಟದ ಪದಾದಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.