ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ದತ್ತಾಂಶ ಶೇಖರಣಾ ಸಮೀಕ್ಷೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಕೈಗೊಳ್ಳಲಾಗುವ ಸಮೀಕ್ಷೆಗೆ ಮತಕ್ಷೇತ್ರ ಹಂತದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶಿಸಿದ್ದಾರೆ.
೨೬-ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು, ೨೭-ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು, ೨೮-ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು, ೨೯-ಬಬಲೇಶ್ವರ ಮತಕ್ಷೇತ್ರಕ್ಕೆ ವಿಜಯಪುರ ಉಪವಿಭಾಗಾಧಿಕಾರಿಗಳು, ೩೦-ವಿಜಯಪುರ ನಗರ ಮತಕ್ಷೇತ್ರಕ್ಕೆ ಮಹಾನಗರ ಪಾಲಿಕೆ ಆಯುಕ್ತರು, ೩೧-ನಾಗಠಾಣ ಮತಕ್ಷೇತ್ರಕ್ಕೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರು, ೩೨-ಇಂಡಿ ಮತಕ್ಷೇತ್ರಕ್ಕೆ ಇಂಡಿ ಉಪವಿಭಾಗಾಧಿಕಾರಿಗಳನ್ನು ಹಾಗೂ ೩೩-ಸಿಂದಗಿ ಮತಕ್ಷೇತ್ರಕ್ಕೆ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.
