Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀರಾವರಿ ಯೋಜನೆಗಳಿಂದಾಗಿ ಲಕ್ಷಾಂತರ ಬೋರವೆಲ್ ಗಳ ಪುನಶ್ಚೇತನ
(ರಾಜ್ಯ ) ಜಿಲ್ಲೆ

ನೀರಾವರಿ ಯೋಜನೆಗಳಿಂದಾಗಿ ಲಕ್ಷಾಂತರ ಬೋರವೆಲ್ ಗಳ ಪುನಶ್ಚೇತನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಬಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಬತ್ತಿ ಹೋಗಿದ್ದ ಲಕ್ಷಾಂತರ ಬೋರವೆಲ್ ಗಳು ಪುನಶ್ಚೇತನಗೊಂಡಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಮಂಗಳವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದ ಶ್ರೀ ಚಂದ್ರಗಿರಿ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಅವರು ಮಾತನಾಡಿದರು.
ಜಲಸಂಪನ್ಮೂಲ ಸಚಿವನಾಗಿ ಭವಿಷ್ಯದ ದೃಷ್ಟಿಯಿಂದ ಕೈಗೊಂಡ ಯೋಜನೆಗಳು ಫಲ ನೀಡಿದ್ದು, ಅಂತರ್ಜಲ ಹೆಚ್ಚಾಗಿದೆ. ಇದರಿಂದ ಸಂಕಷ್ಟದಲ್ಲಿದ್ದ ರೈತರ ಬಾಳು ಹಸನಾಗಿದ್ದು, ರೈತರು ಉತ್ತಮ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈಗ ಕೆರೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಲಾಗುತ್ತಿದ್ದು, ರಾತ್ರಿ ವೇಳೆ ಹೆಬ್ಬಾಳಟ್ಟಿ ಗ್ರಾಮಕ್ಕೆ ನೀರು ತಲುಪಲಿದೆ. 5ಎ ಮತ್ತು 5ಬಿ ಲಿಫ್ಟ್ ಹಾಗೂ 15 ನೇ ಡಿಸ್ಟ್ರೀಬ್ಯೂಟರಿ ಕಾಲುವೆ ನಿರ್ಮಿಸುವ ಮೂಲಕ ಈ ಭಾಗದಲ್ಲಿ ಬಾಕಿ ಉಳಿದ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಇದರಿಂದ ಹೆಬ್ಬಾಳಟ್ಟಿ ಗ್ರಾಮದ 7 ಸಾವಿರ ಎಕರೆ ಪ್ರದೇಶ ನೀರಾವರಿಗೆ ಒಳಪಡಲಿದೆ. ಅಲ್ಲದೇ, ಟೊಯೊಟಾ ಕಿರ್ಲೋಸರ್ ಕಂಪನಿ ಸಿ.ಎಸ್.ಆರ್ ಅನುದಾಡಿ ಗ್ರಾಮದಲ್ಲಿ 5 ಶಾಲಾ ಕೊಠಡಿ ನಿರ್ಮಿಸಲಿದೆ. ರೈತರು ತಮ್ಮ ಮಕ್ಕಳ ಜೀವನ ರೂಪಿಸಿಕೊಳ್ಳಲು ಉತ್ತಮ ಶಿಕ್ಷಣ ನೀಡಬೇಕು ಎಂದು ಅವರು ಹೇಳಿದರು.
ಈಗ ಕೈಗಾರಿಕೆ ಸಚಿವನಾಗಿ ಜಿಲ್ಲೆಗೆ ಕೈಗಾರಿಕೆಗಳನ್ನು ತರುತ್ತಿದ್ದೇನೆ. ಅಲ್ಲದೇ, ಈಗಾಗಲೇ ಉದ್ಯೋಗ ಮೇಳ ನಡೆಸಿ ಟೊಯೊಟಾ ಕಂಪನಿಯಲ್ಲಿ ಸುಮಾರು 500 ಯುವಕರಿಗೆ ಕೆಲಸ ಕೊಡಿಸಲಾಗಿದೆ. ಮುಂಬರುವ ದಿನಗಳಲ್ಲಿ ಫಾಕ್ಸಕಾನ್ ಕಂಪನಿಯವರು ಉದ್ಯೋಗ ಮೇಳ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ನಂತರ ಹೊಳೆಹಂಗರಗಿ ಗ್ರಾಮದಲ್ಲಿ ಸಂಗೋಳಿ ರಾಯಣ್ಣ ಪ್ರತಿಮೆ ಉದ್ಘಾಟಿಸಿ ಹಾಗೂ ಶ್ರೀ ಭೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ಹೆಬ್ಬಾಳಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಹೆಬ್ಬಾಳಟ್ಟಿ ಶ್ರೀ ಚಂದ್ರಗಿರಿ ಮಠದ ಶ್ರೀ ಸಿದ್ಧಲಿಂಗಯ್ಯ ರುದ್ರಯ್ಯ ಹಿರೇಮಠ, ಅಶೋಕ ಕಾಖಂಡಕಿ, ಎಸ್.ಪಿ.ತಾಂವಶಿ, ಚನ್ನಪ್ಪ ಕೊಪ್ಪದ, ರಮೇಶ ದೇಸಾಯಿ, ರಫೀಕ್ ಸೋನಾರ್, ಜಾಫರ್ ಇನಾಮದಾರ, ವಿದ್ಯಾರಾಣಿ ತುಂಗಳ, ಭಾರತಿ ಹಿರೇಮಠ ಮತ್ತು ಹೊಳೆಹಂಗರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೊಳಸಾರದ ಅಭಿನವ ಪುಂಡಲಿಂಗ ಮಹಾರಾಜರು, ಆನಂದಕುಮಾರ ದೇಸಾಯಿ, ಬಸವರಾಜ ದೇಸಾಯಿ, ಭೀಮಶಿ ನಾಗರಾಳ, ಎಂ. ಜೆ. ಯಂಕಂಚಿ, ಪ್ರಶಾಂತ ದೇಸಾಯಿ, ಸದಾಶಿವ ಬೀಳಗಿ, ಭೀರಪ್ಪ ಜುಮನಾಳ, ಕಲ್ಲನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.