ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಪಟ್ಟಣದ ರಾಜ್ಯ ಹೆದ್ದಾರಿ ಮೇಲಿರುವ ಬಸವೇಶ್ವರ ವೃತ್ತದಲ್ಲಿ, ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ, ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಾಲಹಳ್ಳಿ ಗ್ರಾಮದ ಬಸವೇಶ್ವರ ವೃತ್ತದಲ್ಲಿ, ಕಾಯಕ ಯೋಗಿ, ಕ್ರಾಂತಿ ಯೋಗಿ, ಯುಗಪುರುಷ, ವಚನ ಸಾಹಿತ್ಯದ ಮೂಲಕ ಸಮಸಮಾಜ ಕಟ್ಟಬಯಸಿದ ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಶಾಲಾ ಕಾಲೇಜುಗಳು ಮತ್ತು ವಿವಿಧ ಸರ್ಕಾರಿ ಕಛೇರಿಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅತ್ಯಂತ ಅರ್ಥಪೂರ್ಣವಾಗಿ ಸಡಗರ ಸಂಭ್ರಮದಿಂದ ಆಚರಿಸಿದರು.

