ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅನುಭವ ಮಂಟಪವನ್ನು ಸ್ಥಾಪನೆ ಮಾಡುವ ಮೂಲಕ ಜಗತ್ತಿಗೆ ಮೊದಲ ಬಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪರಿಚಯಿಸಿದ ಶ್ರೇಯ ಬಸವಣ್ಣನವರಿಗೆ ಸಲ್ಲುತ್ತದೆ. ಅರಮನೆಯ ಮುಂದೆ ಮಹಾಮನೆಯನ್ನು ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಸಮಸ್ಯೆಗಳ ಕುರಿತು ಚರ್ಚಿಸಿ ವಚನಗಳ ಮೂಲಕ ಪರಿಹಾರವನ್ನು ಸೂಚಿಸುವ ಕಾರ್ಯವನ್ನು ಅಂದು ಶರಣ ಶರಣೆಯರು ಮಾಡಿದ್ದು ಇಂದು ಸರ್ಕಾರಕ್ಕೆ ಮಾದರಿಯಾಗಿದೆ ಎಂದು ಪ್ರಾಚಾರ್ಯ ಶ್ರೀಕಾಂತ ಕೆ.ಎಸ್ ಹೇಳಿದರು.
ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವನ್ನು ಉದ್ಧೇಶಿಸಿ ಅವರು ಮಾತನಾಡಿದರು.
ಕಾಲೇಜಿನ ಸರ್ವ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.