Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮಾಜಕ್ಕೆ ಮೋಸ :ಬಾಸ್ಕರ್‌ಪ್ರಸಾದ್
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮಾಜಕ್ಕೆ ಮೋಸ :ಬಾಸ್ಕರ್‌ಪ್ರಸಾದ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮಾಜಕ್ಕೆ ಮೋಸ :ಬಾಸ್ಕರ್‌ಪ್ರಸಾದ್

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಉಪ ಚುನಾವಣೆ ಸಂದರ್ಭದಲ್ಲಿ ಒಳ ಮೀಸಲಾತಿ ನೀಡದೇ ಯಾವುದೇ ಹುದ್ದೆಗಳನ್ನು ತುಂಬಿಕೊಳ್ಳುವುದಿಲ್ಲ ಎಂದು ಮಾತು ಕೊಟ್ಟಿದ್ದ ಸಿದ್ದರಾಮಯ್ಯ, ಸರಕಾರ ಬಂದೊಡನೆ ಕೊಟ್ಟ ಮಾತನ್ನು ತಪ್ಪಿ ಮೀಸಲಾತಿಯಡಿ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡು ಮಾದಿಗ ಸಮಾಜಕ್ಕೆ ಮೋಸ ಮಾಡಿದೆ ಎಂದು ಒಳ ಮೀಸಲಾತಿ ಕ್ರಾಂತಿಕಾರಿ ರಥ ಯಾತ್ರೆ ರೂವಾರಿ ಹಾಗೂ ಹೋರಾಟಗಾರ ಬಿ.ಆರ್.ಬಾಸ್ಕರ್‌ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳ ಮೀಸಲಾತಿ ಕ್ರಾಂತಿಕಾರಿ ರಥ ಯಾತ್ರೆ ರೂವಾರಿ ಹಾಗೂ ಹೋರಾಟಗಾರ ಮಾತನಾಡಿದ ಅವರು, ೪೦ವರ್ಷಗಳ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ಭರವಸೆ ನೀಡಿ ಜನಗಣತಿಗೆ ಅದೇಶಿಸಿದೆ. ಆದರೆ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳು, ಬಡ್ತಿ ಮೀಸಲಾತಿ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ಮುಂದಾಗಿದ್ದು ಇದು ಮಾದಿಗ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರಿ ವಂಚಿಸುವ ತಂತ್ರಗಾರಿಕೆಯಾಗಿದೆ.
ಏ.೦೫ರಂದು ಬಾಬು ಜಗಜೀವನರಾಮ ಅವರ ಜಯಂತಿ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಇಲ್ಲಿಯವರೆಗೂ ಯಾವುದೇ ಬಡ್ತಿ ಮಾಡಿಲ್ಲ. ಒಂದು ವೇಳೆ ಮಾಡಿದ್ದರೂ ಅದನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದಾರೆ. ಆದರೂ ೨೯ದಿನಗಳಲ್ಲಿ ನೂರಾರು ಹುದ್ದೆಗಳಿಗೆ ಬಡ್ತಿ ನೀಡಿದ್ದಾರೆ. ಒಳ ಮೀಸಲಾತಿ ಎಂಬುದು ನಮಗೆ ಭಿಕ್ಷೆಯಲ್ಲ ಅದು ನಮ್ಮ ಹಕ್ಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದರೂ ಮೀಸಲಾತಿ ಆದೇಶ ನೀಡುವುದಕ್ಕೆ ಇರುವ ಕಾರಣವಾದರೂ ಏನು? ಒಂದು ವೇಳೆ ಮೀಸಲಾತಿ ಜಾರಿಯಾಗುವವರೆಗೂ ಬಡ್ತಿ ನಿಲ್ಲಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸಿಗರನ್ನು ಮಾದಿಗ ಕೇರಿಗೆ ಹೆಜ್ಜೆಯಿಡಲು ಅವಕಾಶ ಕೊಡುವುದಿಲ್ಲ ಎಂದು ಗುಡುಗಿದರು.
೨೦೨೩ರ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬಂದರೆ ಒಳ ಮೀಲಾತಿಯನ್ನು ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ಆದರೆ, ಎರಡೂವರೆ ವರ್ಷ ಕಳೆದರೂ ಒಳಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿದೆ. ಒಳ ಮೀಸಲಾತಿ ಜಾರಿ ಮಾಡದೆ ಇಲ್ಲಸಲ್ಲದ ತಂತ್ರಗಳನ್ನು ಹೆಣೆಯುತ್ತಿದ್ದು, ಇದರಿಂದ ಮಾದಿಗ ಸಮುದಾಯದ ತಾಳ್ಮೆ ಕಟ್ಟೆ ಒಡೆದಿದ್ದು, ಕ್ರಾಂತಿಕಾರಿ ಹೋರಾಟಕ್ಕೆ ಇಳಿಯುವ ಮುನ್ನ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಾಯಬಣ್ಣ ಪುರದಾಳ, ಸಾಯಬಣ್ಣ ದೇವರಮನಿ, ಸಿದ್ದು ಪೂಜಾರಿ, ಖಾಜು ಬಂಕಲಗಿ, ಯಲ್ಲು ಇಂಗಳಗಿ, ಗುಡೆಮಾರನಳ್ಳಿ ನಾಗರಾಜ, ನಾಗು ಕಟ್ಟಿಮನಿ, ರಾಜಕುಮಾರ ಭಾಸಗಿ, ರಾಜು ಗುಬ್ಬೇವಾಡ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.