ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ್ ೦೧ ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦-೩೦ಕ್ಕೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮನಗೂಳಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಯುನಿಸೆಫ್ ಮತ್ತು ಐ.ಐ.ಎಚ್.ಎಂ.ಆರ್. ಪ್ರಾದೇಶಿಕ ಸಂಯೋಜಕರಾದ ಗುರುಶಾಂತ ಹಿರೇಮಠ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.
Related Posts
Add A Comment