ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ನಾಳೆ ದಿ.2 ಶುಕ್ರವಾರ ತಮ್ಮ ಗೃಹ ಕಚೇರಿಯಲ್ಲಿ ಬೆ.10ಗಂ. ಮ. 12ಗಂ. ವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.
ನಂತರ ಸಂ. 4ಗಂ. ವಿಜಯಪುರದಿಂದ ಹೊರಟು ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿಯಲ್ಲಿ ಸಂ. 7ಗಂ. ನಡೆಯಲಿರುವ ಸದ್ಧರ್ಮ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ರಾ. 9ಗಂ. ಉಜ್ಜಯಿನಿಯಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಮಾನ್ಯ ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
