ವಿಜಯಪುರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ವಿಜಯಪುರ ಜಿಲ್ಲೆಯ ಜಿಲ್ಲಾ ಕೇಂದ್ರ ಹಾಗೂ ತಾಲೂಕಾ ಕೇಂದ್ರಗಳ ಎಲ್ಲ ನ್ಯಾಯಾಲಯಗಳಲ್ಲಿ ಡಿಸೆಂಬರ್ ೯ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಲೋಕ್ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಎಲ್ಲ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು, ಕೌಟುಂಬಿಕ ವ್ಯಾಜ್ಯಗಳು, ಆಸ್ತಿಯಲ್ಲಿ ಪಾಲು ಕೋರಿ ಸಲ್ಲಿಸಿರುವ ದಾವೆಗಳು, ದೂರವಾಣಿ, ನೀರಿನ ಬಿಲ್ಲು ಬಾಕಿ ಪಾವತಿ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿರುವ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವ್ಹಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು.
ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಸಂತೋಷ ಎಸ್.ಕುಂದರ್ ಅವರು ಕೋರಿದ್ದಾರೆ.
Related Posts
Add A Comment