Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ :ಪತ್ತಾರ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ :ಪತ್ತಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ವಿಶ್ವಗುರು, ಸಾಂಸ್ಕ್ರತಿಕ ನಾಯಕ ಬಸವೇಶ್ವರರು ನುಡಿದಂತೆ ನಡೆಯುವ ಮೂಲಕ ನಿಷ್ಕಲ್ಮಶವಾದ ಆಡಳಿತವನ್ನು ನೀಡುವ ಜೊತೆಗೆ ಆದರ್ಶ ಜೀವನ ಸಾಗಿಸಲು ಬೇಕಾದ ವಚನ ಸಾಹಿತ್ಯವನ್ನು ನೀಡಿದ್ದಾರೆ. ಅವರು ನೀಡಿದ ವಚನ ಸಾಹಿತ್ಯ ಅರಿತುಕೊಳ್ಳುವ ಜೊತೆಗೆ ಅದರಂತೆ ನಡೆದರೆ ನಮ್ಮ ಜೀವನ ಆದರ್ಶಮಯವಾಗುತ್ತದೆ ಎಂದು ತಾಳಿಕೋಟಿಯ ಜೆಎಸ್ಜಿ ಪೌಂಡೇಶನ್ದ ಕಾರ್ಯದರ್ಶಿ ಶ್ರೀಕಾಂತ ಪತ್ತಾರ ಹೇಳಿದರು.
ಪಟ್ಟಣದ ಬಸವೇಶ್ವರ ದೇವಸ್ಥಾನದ ಒಳಾವರಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬಸವ ಜಯಂತಿಯಂಗವಾಗಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಸವೇಶ್ವರ ಜಯಂತೋತ್ಸವದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಈ ಪಾವನ ನೆಲದಲ್ಲಿ ಜನಿಸಿದ ಬಸವೇಶ್ವರರು ವಚನ ಸಾಹಿತ್ಯ ನೀಡುವ ಮೂಲಕ ಸರ್ವರಿಗೂ ಸಮವಾಗಿ ಬಾಳಬೇಕೆಂಬ ತತ್ವ ಸಂದೇಶ ನೀಡಿದರು. ಬಸವೇಶ್ವರರ ಉದಾತ್ತ ಚಿಂತನೆ ಅರಿತುಕೊಂಡು ನಾವೆಲ್ಲರೂ ನಡೆದರೆ ನೈತಿಕ ಜೀವನ ನಮ್ಮದಾಗುತ್ತದೆ. ಕಾಯಕ-ದಾಸೋಹದ ಕಲ್ಪನೆಯನ್ನು ಜಗತ್ತಿಗೆ ನೀಡುವ ಮೂಲಕ ಕಾಯಕ ಗೌರವದ ಪ್ರತೀಕವಾಗಿದೆ. ಕಾಯಕದಿಂದ ಬರುವ ಸಂಪತ್ತಿನಲ್ಲಿ ದಾಸೋಹ ಮಾಡುವ ಮೂಲಕ ಎಲ್ಲರೊಂದಿಗೆ ಸಾಮರಸ್ಯದಿಂದ ಬದುಕು ಸಾಗಿಸಬೇಕೆಂಬ ಸಂದೇಶ ಸಾರಿದ್ದಾರೆ ಎಂದರು.
ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಮಾತನಾಡಿ, ವೇದವನ್ನು ಓದಿದವರು ದೊಡ್ಡವರಲ್ಲ. ವೇದ ತಿಳಿದುಕೊಂಡವರು ದೊಡ್ಡವರು. ೧೨ ನೇ ಶತಮಾನದ ಶರಣರು ನುಡಿದಂತೆ ನಡೆದು ತೋರಿಸಿದರು. ಬಸವೇಶ್ವರರ ತತ್ವಗಳ ಕುರಿತು ಕೇವಲ ಮಾತನಾಡುವದು ಸರಿಯಲ್ಲ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು. ಹಂಪಿ ಉತ್ಸವ ಮಾದರಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಬಸವ ಜನಿಸಿದ ಈ ನೆಲದಲ್ಲಿ ಪ್ರತಿ ವರ್ಷ ಬಸವ ಜಯಂತಿಯಂದು ಸರ್ಕಾರ ಆಚರಣೆ ಮಾಡುವಂತಾಗಬೇಕೆಂದರು.
ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಈಗಾಗಲೇ ಬಸವೇಶ್ವರ ಜನಿಸಿದ ಬಸವನಬಾಗೇವಾಡಿ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಸರ್ಕಾರ ರಚನೆ ಮಾಡಿದ್ದು ಸ್ವಾಗತಾರ್ಹ. ಮುಂಬರುವ ದಿನಗಳಲ್ಲಿ ಈ ನೆಲದಲ್ಲಿ ಸರ್ಕಾರದಿಂದ ಅದ್ದೂರಿ ಬಸವ ಜಯಂತಿ ಆಚರಣೆಗೆ ಸಚಿವ ಶಿವಾನಂದ ಪಾಟೀಲ ನೆರವೇರಿಸುವ ಭರವಸೆ ನೀಡಿದ್ದಾರೆ ಎಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ,ವಚನ ಸಾಹಿತ್ಯ ಬದುಕಿಗೆ ಸ್ಪೂರ್ತಿದಾಯಕವಾಗಿದೆ. ಕೇವಲ ಅದರ ಅಧ್ಯಯನ ಸಾಲದು. ಅದರಲ್ಲಿ ಮೌಲ್ಯ ಪಾಲನೆಯಾಗುವದು ಮುಖ್ಯವಾಗಿದೆ. ಶರಣರು ನುಡಿದಂತೆ ನಡೆದು ತಮ್ಮ ಅನುಭಾವವನ್ನು ವಚನ ಸಾಹಿತ್ಯದಲ್ಲಿ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಬಸವ ಜಯಂತಿಯನ್ನು ಅದ್ದೂರಿಯಾಗಿ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಇದರ ಬಗ್ಗೆ ಸಂಕಲ್ಪ ಮಾಡಬೇಕಿದೆ ಎಂದರು.
ಕೂಡಸಂಗಮ ಅಭಿವೃದ್ಧಿ ಮಂಡಳಿಯ ತಹಸೀಲ್ದಾರ ಜೆ.ಎಸ್.ಚಿನಿವಾಲರ ಸ್ವಾಗತಿಸಿದರು. ಎಸ್.ಎಂ.ಬಿಸ್ಟಗೊಂಡ ನಿರೂಪಿಸಿದರು.ವಿರೇಶ ವಾಲಿ, ಸಾಕ್ಷಿ ಹಿರೇಮಠ ಅವರು ವಚನ ಸಂಗೀತ ನಡೆಸಿಕೊಟ್ಟರು. ಲಕ್ಷ್ಮೀ ತೇರದಾಳಮಠ ಅವರ ತಂಡದಿಂದ, ನಟರಾಜ ಅಕಾಡೆಮಿ, ನಾಟ್ಯ ಕಲಾ ಅಕಾಡೆಮಿ ವಚನ ನೃತ್ಯರೂಪಕಗಳು ಜನಮನಸೂರೆಗೊಂಡವು. ನಂತರ ರಾತ್ರಿ ಅಲಂಕೃತ ಬಸವೇಶ್ವರ ಪಲ್ಲಕ್ಕಿ ಹಾಗೂ ಬಸವೇಶ್ವರ ಭಾವಚಿತ್ರ ಭವ್ಯ ಮೆರವಣಿಗೆ ಸಕಲ ಮಂಗಳ ವಾದ್ಯ ವೈಭವದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೆಳಗ್ಗೆ ಜಾವದವರೆಗೂ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.