Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ಪ್ರಕಟಿಸಿದ ಜಾತಿ ಗಣತಿ ದತ್ತಾಂಶ ವಾಸ್ತವವಾಗಿಲ್ಲ :ಚವ್ಹಾಣ
(ರಾಜ್ಯ ) ಜಿಲ್ಲೆ

ಸರ್ಕಾರ ಪ್ರಕಟಿಸಿದ ಜಾತಿ ಗಣತಿ ದತ್ತಾಂಶ ವಾಸ್ತವವಾಗಿಲ್ಲ :ಚವ್ಹಾಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಈ ಎಲ್ಲ ಬಾಂಧವರು ಸಾಮರಸ್ಯ,ಅನ್ಯೋನ್ಯವಾಗಿವಾಗಿದ್ದಾರೆ. ಸರ್ಕಾರವು ಒಳಮೀಸಲಾತಿ ಮಾಡುವ ಮೂಲಕ ಈ ಜಾತಿಗಳಲ್ಲಿ ಒಡಕು ಉಂಟು ಮಾಡಲು ಹೊರಟಿದೆ. ಈಚೆಗೆ ಸರ್ಕಾರ ತರಾತುರಿಯಲ್ಲಿ ಪ್ರಕಟಿಸಿದ ಜಾತಿ ಗಣತಿ ದತ್ತಾಂಶ ವಾಸ್ತವವಾಗಿಲ್ಲ ಎಂದು ಕರ್ನಾಟಕ ಪ್ರದೇಶ ಬಂಜಾರಾ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಚವ್ಹಾಣ ಹೇಳಿದರು.
ಪಟ್ಟಣದ ಈರಕಾರ ಮುತ್ಯಾನ ದೇವಸ್ಥಾನದಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಿಂದ
ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರ ಗಣತಿ ಕಾರ್ಯ ಮೇ. ೫ ರಿಂದ 17 ರವರೆಗೆ ಜಾತಿ ಸಮೀಕ್ಷೆ ಮಾಡಲಿದೆ. ಬಂಜಾರ ಸಮುದಾಯದವರು ಹೊಟ್ಟೆಪಾಡಿಗಾಗಿ ಗೂಳೆಹೋಗಿರುವದರಿಂದ ಸಮಾಜಕ್ಕೆ ಹಿನ್ನೆಡೆಯಾಗುವ ಭೀತಿ ಇರುವದರಿಂದ ಈ ಸಮೀಕ್ಷೆಯನ್ನು ಬಂಜಾರ ಸಮಾಜ ವಿರೋಧಿಸುತ್ತದೆ. ಸರ್ಕಾರ ಒಳಮಿಸಲಾತಿ ಸಮಿಕ್ಷೆಗೆ ಆತುರದ ನಿರ್ಧಾರ ಬೇಡ ಎಂದರು.
ಒಳಮಿಸಲಾತಿ ಹೆಸರಲ್ಲಿ ಒಗ್ಗಟ್ಟಾಗಿರುವ ಸಮುದಾಯಗಳನ್ನು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ. ಇದು ಖಂಡನೀಯ. ಒಳಮೀಸಲಾತಿ ಜಾರಿಗಾಗಿ ನ್ಯಾ.ನಾಗಮೋಹನ ದಾಸ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಮೇ ೨೦೨೫ರ ಅಂತ್ಯದ ಒಳಗಾಗಿ ಜಾತಿ ಸಮಿಕ್ಷೆ ಪೂರ್ಣಗೊಳಿಸಬೇಕಾಗಿದೆ. ಈಗಾಗಲೆ ಒಂದು ತಿಂಗಳು ಗತಿಸಿದೆ. ಇನ್ನುಳಿದ ಕೆಲವೇ ದಿನಗಳಲ್ಲಿ ನ್ಯಾಯ ಸಮ್ಮತ ಸಮಿಕ್ಷೆ ನಡೆಸುವದು ಅಸಾಧ್ಯ ಎಂದರು.
ಕೆಲವು ಕುತಂತ್ರಿಗಳು ಬಂಜಾರ ಸಮುದಾಯ ಮುಂದುವರೆದಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯದ ಹಲವಾರು ತಾಂಡಾಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ಕೆಲವು ತಾಂಡಾಗಳು ಇನ್ನೂವರೆಗೂ ವಿದ್ಯುತ್ ಸೌಲಭ್ಯವಿಲ್ಲದೆ ಕತ್ತಲಲ್ಲಿ ಜೀವನ ಸಾಗಿಸುತ್ತಿವೆಯಲ್ಲದೆ ಸರಿಯಾದ ರಸ್ತೆ ಸೌಕರ್ಯವಿಲ್ಲದೆ ಆ ತಾಂಡಾಗಳಗೆ ಹೋಗುವದು ಕಷ್ಟದ ಕೆಲಸವಾಗಿದೆ. ಇಂತಹ ಸಂದರ್ಭದಲ್ಲಿ ಸಮೀಕ್ಷೆದಾರರು ತಾಂಡಾವನ್ನು ತಲುಪಿ ಸರಿಯಾದ ಸಮೀಕ್ಷೆ ನಡೆಸುವದು ಕಷ್ಠದ ಕೆಲಸ. ಇದರಿಂದ ನ್ಯಾಯ ಸಮ್ಮತ ಸಮೀಕ್ಷೆ ನಡೆಸುವದು ಅನುಮಾನವನ್ನು ಮೂಡಿಸುತ್ತದೆ ಎಂದರು.
ಒಂದು ವೇಳೆ ಸಮೀಕ್ಷೆ ನಡೆಸುವದೇ ಆದಲ್ಲಿ ಕೇಂದ್ರ ಸರ್ಕಾರದ ಜನಗಣತಿ ಮುಗಿದ ನಂತರ ವಾಸ್ತವಿಕ ದತ್ತಾಂಶವನ್ನು ಪರಿಗಣಿಸಿ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ನಡೆಸಬೇಕು. ನಗರ ಪ್ರದೇಶಗಳಲ್ಲಿ ಹಲವಾರು ಬಂಜಾರಾ ಸಮುದಾಯದವರು ವಾಸಿಸುತ್ತಿದ್ದಾರೆ. ಅವರುಗಳನ್ನು ಗುರುತಿಸುವ ಕಾರ್ಯವಾಗಬೇಕು. ಜೊತೆಗೆ ಕೆಲ ಸಮುದಾಯದವರು ಬೇರೆ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅಂತಹವರ ಸಮೀಕ್ಷೆ ನಡೆಸುವ ಕುರಿತಾಗಿ ಸ್ಪಷ್ಠ ನಿರ್ಧಾರ ಕೈಗೊಳ್ಳಬೇಕು. ನ್ಯಾಯ ಸಮ್ಮತ ಒಳಮೀಸಲಾತಿ ಸಮೀಕ್ಷೆಯಲ್ಲಿ ಬಂಜಾರರು ಹೆಚ್ಚು ಜನಸಂಖ್ಯೆ ಹೊಂದಿದಲ್ಲಿ ಸರ್ಕಾರ ಅವರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಬಂಜಾರರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಬಾಳು ರಾಠೋಡ, ಬಂಜಾರಾ ಸಮಾಜದ ಮುಖಂಡರಾದ ಹರಿಲಾಲ ನಾಯಕ,ಬಾಬು ಚವ್ಹಾಣ, ಶಾಂತು ರಾಠೋಡ, ಗ್ರಾಪಂ ಸದಸ್ಯ ಸಂತೋಷ ನಾಯಕ, ಭೀಮು ಪವಾರ, ರವಿ ರಾಠೋಡ(ಉಪ್ಪಲದಿನ್ನಿ), ಪುನೀತ ಲಮಾಣಿ, ಸುರೇಶ ಕಾರಬಾರಿ, ಶಿವಾಜಿ ರಾಠೋಡ, ಶಂಕರ ಲಮಾಣಿ, ಕೇಶುಬಾಯಿ ಲಮಾಣಿ, ಶಶಿಧರ ರಾಠೋಡ, ಉದಯ ರಾಠೋಡ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.