Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರದ ಜಾತಿ ಗಣತಿಗೆ ರಾಹುಲ್ ಒತ್ತಡ ಕಾರಣ :ಸಿಎಂ
(ರಾಜ್ಯ ) ಜಿಲ್ಲೆ

ಕೇಂದ್ರದ ಜಾತಿ ಗಣತಿಗೆ ರಾಹುಲ್ ಒತ್ತಡ ಕಾರಣ :ಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಐದು ವರ್ಷಗಳಿಂದ ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಅವಿರತ ಒತ್ತಡ | ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದಕ್ಕೆ ವಿಶೇಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅವಿರತ ಪ್ರಯತ್ನ ಮತ್ತು ಒತ್ತಡ ಕಾರಣ ಎಂದು ಗುರುವಾರ ಹೇಳಿದ್ದಾರೆ.
“ಕೇಂದ್ರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಇದಕ್ಕಾಗಿ ನಾನು ರಾಹುಲ್ ಗಾಂಧಿ ಅವರನ್ನು ಹೆಚ್ಚು ಅಭಿನಂದಿಸುತ್ತೇನೆ. ಏಕೆಂದರೆ, ಕಳೆದ ಐದು ವರ್ಷಗಳಿಂದ, ಅವರು ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಮತ್ತು ಅದಕ್ಕಾಗಿ ವ್ಯಾಪಕ ಪ್ರಯತ್ನ ಮಾಡಿದ್ದಾರೆ” ಎಂದು ಸಿಎಂ ತಿಳಿಸಿದರು.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲೇ ಜಾತಿ ಗಣತಿಯನ್ನು ಸೇರಿಸಿದೆ. ಕೇಂದ್ರದ ಈ ನಿರ್ಧಾರ ಮುಂಬರುವ ಬಿಹಾರ ಚುನಾವಣೆಗೆ ಲಿಂಕ್ ಮಾಡಬಹುದು. ಈ ಜನಗಣತಿ ಜೊತೆಗೆ ಸಮಗ್ರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಗತ್ಯವನ್ನು ಸಿದ್ದರಾಮಯ್ಯ ಒತ್ತಿ ಹೇಳಿದರು.
ಈ ಜಾತಿ ಗಣತಿಗೆ ಒಂದು ಟೈಮ್ ಲೈನ್ ನಿಗದಿಪಡಿಸುವಂತೆ ರಾಹುಲ್ ಗಾಂಧಿ ಕೂಡ ಸ್ಪಷ್ಟವಾಗಿ ಹೇಳಿದ್ದಾರೆ ಮತ್ತು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದರು.
ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು.
ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ಮೋದಿ ಅವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದು ಸಿಎಂ ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ”

– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.