ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಮಲ್ಲಿಕಾರ್ಜುನ ನಗರದ ಶಿವಾಲಯದಲ್ಲಿ ಮೇ.೦೨ ರಂದು ಸಂಜೆ ೬ ಗಂಟೆಗೆ ವಿಶ್ವಗುರು ಬಸವಣ್ಣನವರ ೮೯೨ ನೇ ಜಯಂತಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಜ್ಞಾನಯೋಗಾಸ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಜಂಟಿ ಕೃಷಿ ನಿರ್ದೇಶಕ ಸಿ.ಬಿ.ಬೇವನೂರ ವಹಿಸಲಿದ್ದು, ಧ್ವಜಾರೋಹಣವನ್ನು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ.ಜೇವೂರ ನೆರವೇರಿಸಲಿದ್ದಾರೆ. ರಾಜ್ಯ ರಾಷ್ಟ್ರೀಯ ದಳದ ಗೌರವಾಧ್ಯಕ್ಷ ಬಸವರಾಜ ಕೊಂಡಗೂಳಿ (ಕಗ್ಗೋಡ) ಪ್ರಾಸ್ತಾವಿಕ ನುಡಿಗಳಾಡಲಿದ್ದು, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ಅವಜಿ ಸ್ವಾಗತಿಸಲಿದ್ದಾರೆ. ರಾಷ್ಟ್ರೀಯ ಬಸವದಳದ ಅಧ್ಯಕ್ಷ ಮಲ್ಲಿಕಾರ್ಜುನ ಹಳ್ಳಿ, ನಿವೃತ್ತ ಮುಖ್ಯೋಪಾಧ್ಯಾಯ ಜಿ.ಎಸ್.ಬಿರಾದಾರ ಮೊದಲಾದವರು ಪಾಲ್ಗೊಳ್ಳಲಿದ್ದು, ಬಸವಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಗಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

